ಬೆಂಗಳೂರು: ಕರ್ನಾಟಕದಲ್ಲಿ ನವೋದ್ಯಮ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ್ದಾರೆ.
ಬೆಂಗಳೂರು ಅರಮನೆ ಆವರಣದಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಆರು ತಿಂಗಳೊಳಗೆ ನವೋದ್ಯಮ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಪರಿಸರ ಸ್ನೇಹಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಅಗತ್ಯವಿದ್ದು, ಪರಿಸರವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವ ಧ್ಯೇಯ ಎಲ್ಲಾ ಆವಿಷ್ಕಾರಗಳ ಹಿಂದೆ ಇರಬೇಕು ಎಂದು ಅವರು ಒತ್ತಿ ಹೇಳಿದರು.
ಬೆಂಗಳೂರಿನ ಆಚೆಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಾವು ಕಾರ್ಯಯೋನ್ಮುಖರಾಗಿದ್ದೇವೆ. ಇದಕ್ಕಾಗಿಯೇ ಆರು ಹೊಸ ನಗರಗಳ ನಿರ್ಮಾಣಕ್ಕೆ ನಿರ್ಧರಿಸಿದ್ದೇವೆ. ಬೆಂಗಳೂರು ಸಮೀಪ ಜ್ಞಾನ ನಗರವನ್ನು ಅಭಿವೃದ್ದಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Being an innovating society our duty is to ensure innovation of the highest order takes place in the City. At the same time we want to see that technology goes beyond Bengaluru since the entire Karnataka is talented.#BengaluruTechSummit pic.twitter.com/KDg2owA1M1
— Basavaraj S Bommai (@BSBommai) November 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.