ನವದೆಹಲಿ: ಮಧ್ಯ ಏಷ್ಯಾ ರಾಷ್ಟ್ರಗಳ ಯುವ ನಿಯೋಗ ಇಂದು ಭಾರತಕ್ಕೆ ಭೇಟಿ ನೀಡಲಿದೆ. ಭಾರತದ ಉಪಕ್ರಮದ ಅಡಿಯಲ್ಲಿ ಏಳು ದಿನಗಳ ಕಾಲ ಭೇಟಿ ನಡೆಯಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ವರ್ಷದ ಜನವರಿಯಲ್ಲಿ ನಡೆದ ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯಲ್ಲಿ, ವಾರ್ಷಿಕವಾಗಿ 100 ಸದಸ್ಯರ ಯುವ ನಿಯೋಗವು ಮಧ್ಯ ಏಷ್ಯಾದ ದೇಶಗಳಿಂದ ಭಾರತಕ್ಕೆ ಭೇಟಿ ನೀಡುವ ನಿರ್ಣಯ ತೆಗೆದುಕೊಳ್ಳಲಾಯಿತು.
ಭಾರತ-ಮಧ್ಯ ಏಷ್ಯನ್ ಶೃಂಗಸಭೆಯ ಚೌಕಟ್ಟು ಭಾರತ ಮತ್ತು ಮಧ್ಯ ಏಷ್ಯಾದ ದೇಶಗಳ ನಡುವಿನ ಹಳೆಯ-ಪ್ರಾಚೀನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳನ್ನು ಪುನರುಜ್ಜೀವನಗೊಳಿಸುವ ಮತ್ತು ಮರುರೂಪಿಸುವ ಪ್ರಯತ್ನವಾಗಿದೆ.
ಮಧ್ಯ ಏಷ್ಯಾದ ಯುವ ನಾಯಕರು, ಉನ್ನತ ಸಾಧಕರು ಮತ್ತು ಪ್ರಭಾವಿಗಳು ಭಾರತದ ಆರ್ಥಿಕತೆ, ಅದರ ತಾಂತ್ರಿಕ, ಕೈಗಾರಿಕಾ ಮತ್ತು ಸಂಶೋಧನಾ ಸಾಮರ್ಥ್ಯಗಳ ಬಗ್ಗೆ ತಿಳುವಳಿಕೆಯನ್ನು ಪಡೆಯಲಿದ್ದಾರೆ. ಅಲ್ಲದೇ ಅವರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ವೈವಿಧ್ಯತೆಯನ್ನು ಸಹ ಆನಂದಿಸಲಿದ್ದಾರೆ. ಕಾರ್ಯಕ್ರಮವು ದೆಹಲಿ ಮತ್ತು ಮುಂಬೈನಲ್ಲಿರುವ ಪ್ರಮುಖ ಸಂಶೋಧನಾ ಸಂಸ್ಥೆಗಳು ಮತ್ತು ಭಾರತೀಯ ಕಂಪನಿಗಳಿಗೆ ಭೇಟಿಗಳನ್ನು ಒಳಗೊಂಡಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.