ನವದೆಹಲಿ: ವಿಮಾನ ಪ್ರಯಾಣದ ಸಂದರ್ಭದಲ್ಲಿ ಕಡ್ಡಾಯ ಮಾಸ್ಕ್ ಧರಿಸುವ ನಿಯವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಕಯ ವಾಪಾಸ್ ಪಡೆದುಕೊಂಡಿದೆ.
ವಾಯು ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಆದರೆ ಕರೋನವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಸಂದರ್ಭದಲ್ಲೂ ಪ್ರಯಾಣಿಕರು ಮಾಸ್ಕ್ ಬಳಸುವುದು ಉತ್ತಮ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ಇಲ್ಲಿಯವರೆಗೆ, ವಿಮಾನಗಳಲ್ಲಿ ಮಾಸ್ಕ್ ಅಥವಾ ಫೇಸ್ ಕವರ್ ಬಳಕೆ ಕಡ್ಡಾಯವಾಗಿತ್ತು. ಇನ್ನು ಮುಂದೆ ಕಡ್ಡಾಯವಲ್ಲ.
ಕೋವಿಡ್-19 ನಿರ್ವಹಣೆಯ ಪ್ರತಿಕ್ರಿಯೆಗೆ ಶ್ರೇಣೀಕೃತ ವಿಧಾನದ ಸರ್ಕಾರದ ನೀತಿಗೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವಿಮಾನದಲ್ಲಿನ ಪ್ರಕಟಣೆಗಳು ಕೋವಿಡ್-19 ನಿಂದ ಉಂಟಾಗುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಪ್ರಯಾಣಿಕರು ಮಾಸ್ಕ್ ಅಥವಾ ಫೇಸ್ ಕವರ್ಗಳನ್ನು ಬಳಸಬೇಕು ಎಂದು ಉಲ್ಲೇಖಿಸುತ್ತದೆ. ಆದರೆ ಇದು ಕಡ್ಡಾಯವಲ್ಲ ಮತ್ತು ದಂಡ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.