ನವದೆಹಲಿ: ಎಲ್ಪಿಜಿ (Liquefied Petroleum Gas) ಸಿಲಿಂಡರ್ಗಳು ಶೀಘ್ರದಲ್ಲೇ QR ಕೋಡ್ ಸೌಲಭ್ಯವನ್ನು ಹೊಂದಲಿದೆ. ಇದು ಗೃಹಬಳಕೆಯ ಸಿಲಿಂಡರ್ಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಈ ಕ್ಯೂಆರ್ ಕೋಡ್ ಅನ್ನು ಈಗಿರುವ ಸಿಲಿಂಡರ್ಗಳ ಮೇಲೆ ಅಂಟಿಸಲಾಗುತ್ತದೆ ಮತ್ತು ಹೊಸ ಸಿಲಿಂಡರ್ಗಳ ಮೇಲೆ ವೆಲ್ಡ್ ಮಾಡಲಾಗುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
QR ಕೋಡ್ ಅನ್ನು ಸಕ್ರಿಯಗೊಳಿಸುವುದರಿಂದ ಅನಿಲದ ಕಳ್ಳತನ ತಡೆಯಬಹುದು. ಅಲ್ಲದೇ ಅದರ ಟ್ರ್ಯಾಕಿಂಗ್ ಮತ್ತು ಟ್ರೇಸಿಂಗ್ ಸುಲಭವಾಗುತ್ತದೆ. ಗ್ಯಾಸ್ ಸಿಲಿಂಡರ್ಗಳ ಉತ್ತಮ ದಾಸ್ತಾನು ನಿರ್ವಹಣೆಗೆ ಇರುವ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ ಎಂದು ಪುರಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ, ಪ್ರಸ್ತುತ ದೆಹಲಿಯ ಒಂದು ಪ್ರದೇಶದಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಮತ್ತು ಮುಂದಿನ 3-6 ತಿಂಗಳೊಳಗೆ ದೇಶೀಯ ಎಲ್ಪಿಜಿ ಸಿಲಿಂಡರ್ಗಳು ಕ್ಯೂಆರ್ ಕೋಡ್ಗಳನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದಿದ್ದಾರೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ಸಿಲಿಂಡರ್ಗಳನ್ನು ಎಲ್ಲಿ ತುಂಬಿಸಲಾಗಿದೆ ಎಂಬ ಮಾಹಿತಿಯನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.