ನವದೆಹಲಿ: ಇಂದು ಇಸ್ರೋ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ದೇಶದ ಮೊದಲ ರಾಕೆಟ್ ಅನ್ನು ಉಡಾವಣೆ ಮಾಡಿರುವ ಬಗ್ಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದು, ದೇಶದ ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಖಾಸಗಿಯವರ ಯಶಸ್ವಿ ಮುನ್ನುಗ್ಗುವಿಕೆಯನ್ನು ಶ್ಲಾಘಿಸಿದ್ದಾರೆ.
ಇದು ಭಾರತಕ್ಕೆ ಐತಿಹಾಸಿಕ ಕ್ಷಣವಾಗಿದೆ ಎಂದು ಅವರು ಬಣ್ಣಿಸಿರುವ ಅವರು, ಈ ಸಾಧನೆಯುಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳ ಸಂಪೂರ್ಣ ಪ್ರಯೋಜನವನ್ನು ಪಡೆದ ನಮ್ಮ ಯುವಕರ ಅಗಾಧ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
”ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ರಾಕೆಟ್ ವಿಕ್ರಮ್-ಎಸ್ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೊಂಡಿದ್ದು, ಭಾರತಕ್ಕೆ ಐತಿಹಾಸಿಕ ಕ್ಷಣ! ಇದು ಭಾರತದ ಖಾಸಗಿ ಬಾಹ್ಯಾಕಾಶ ಉದ್ಯಮದ ಪಯಣದಲ್ಲಿ ಪ್ರಮುಖ ಮೈಲಿಗಲ್ಲು. ಈ ಸಾಧನೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಇಸ್ರೋ ಮತ್ತು INSPACeIND ಅವರಿಗೆ ಅಭಿನಂದನೆಗಳು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
A historic moment for India as the rocket Vikram-S, developed by Skyroot Aerospace, took off from Sriharikota today! It is an important milestone in the journey of India’s private space industry. Congrats to @isro & @INSPACeIND for enabling this feat. pic.twitter.com/IqQ8D5Ydh4
— Narendra Modi (@narendramodi) November 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.