ನವದೆಹಲಿ: FIFA ವರ್ಲ್ಡ್ ಕಪ್ 2022 ರ ಉದ್ಘಾಟನಾ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ನಾಳೆಯಿಂದ ಕತಾರ್ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.
FIFA ವರ್ಲ್ಡ್ ಕಪ್ 2022 ನವೆಂಬರ್ 20ರಿಂದ ಡಿಸೆಂಬರ್ ಡಿಸೆಂಬರ್ 18ವರೆಗೆ ಕತಾರ್ನಲ್ಲಿ ನಡೆಯಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತ ಮತ್ತು ಕತಾರ್ ವ್ಯಾಪಾರ, ಭದ್ರತೆ, ರಕ್ಷಣೆ, ಆರೋಗ್ಯ, ಶಿಕ್ಷಣ, ಇತರ ಕ್ಷೇತ್ರಗಳಿಗೆ ವಿಸ್ತರಿಸುವ ಬಹುಮುಖಿ ಪಾಲುದಾರಿಕೆಗಳೊಂದಿಗೆ ನಿಕಟ ಮತ್ತು ಸ್ನೇಹ ಸಂಬಂಧವನ್ನು ಹೊಂದಿವೆ. ಕಳೆದ ಹಣಕಾಸು ವರ್ಷದಲ್ಲಿ, ದ್ವಿಪಕ್ಷೀಯ ವ್ಯಾಪಾರವು 15 ಬಿಲಿಯನ್ ಯುಎಸ್ ಡಾಲರ್ ದಾಟಿದೆ. ಮುಂದಿನ ವರ್ಷ, ಎರಡೂ ದೇಶಗಳು ಪೂರ್ಣ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ವರ್ಷಗಳನ್ನು ಆಚರಿಸುತ್ತವೆ ಎಂದಿದೆ.
ಭೇಟಿಯ ಸಮಯದಲ್ಲಿ, ಧನ್ಖರ್ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು 29 ರಂದು ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತನಾಡಿದ್ದರು ಮತ್ತು ನವೆಂಬರ್ 20 ರಿಂದ ಡಿಸೆಂಬರ್ 18 ರವರೆಗೆ ನಡೆಯಲಿರುವ FIFA ವಿಶ್ವಕಪ್ 2022 ಅನ್ನು ಯಶಸ್ವಿಯಾಗಿ ನಡೆಸಲು ತಮ್ಮ ಶುಭಾಶಯಗಳನ್ನು ತಿಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.