ಬೆಂಗಳೂರು: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಉತ್ಸವದ ವೇಳೆ ಕಾಲೇಜು ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಫೋನ್ನಲ್ಲಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ನಂತರ ಪೊಲೀಸರು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಪಾಕ್ ಪರವಾದ ಘೋಷಣೆಗಳ ಕೂಗು ವಿಡಿಯೋದಲ್ಲಿ ದಾಖಲಾಗಿದೆ.
ಮಾರತ್ತಹಳ್ಳಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿ ವಿಡಿಯೋ ಮಾಡಿದ್ದರು.
ದೃಶ್ಯಾವಳಿಗಳ ಪ್ರಕಾರ, ಕಾಲೇಜು ಉತ್ಸವದ ಸಮಯದಲ್ಲಿ ಜನಸಂದಣಿಯ ನಡುವೆ ನಿಂತಿರುವ ವಿದ್ಯಾರ್ಥಿಗಳಲ್ಲಿ ಒಬ್ಬಳು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವುದನ್ನು ಕಾಣಬಹುದು ಮತ್ತು ಆಕೆಯ ಸಹಪಾಠಿ ಅದನ್ನೇ ಪುನರಾವರ್ತಿಸಿದ್ದಾನೆ ಮತ್ತು ಇನ್ನೊಬ್ಬರು ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ
ಮೂವರೂ ವಿದ್ಯಾರ್ಥಿಗಳ ಮೇಲೆ ಭಾರತೀಯ ದಂಡ ಸಂಹಿತೆ 153 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. “ಯಾವುದೇ ವ್ಯಕ್ತಿಗೆ ಪ್ರಚೋದನೆ ನೀಡುವ ಉದ್ದೇಶದಿಂದ ಅಥವಾ ಅಂತಹ ಪ್ರಚೋದನೆಯು ಗಲಭೆ ಎಸಗುವ ಅಪರಾಧಕ್ಕೆ ಕಾರಣವಾಗಬಹುದು” ಎಂದು ಈ ಸೆಕ್ಷನ್ ಹೇಳುತ್ತದೆ.
ಕಾಲೇಜು ಆಡಳಿತ ಮಂಡಳಿಯು ಈ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.