ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿರ್ಮಿಸಲಾದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ‘ಶೌರ್ಯ ಪ್ರತಿಮೆ’ಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು.
ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಬೊಮ್ಮಾಯಿ, ‘ರಾಮಯ್ಯಗೌಡರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಸ್ವಾತಂತ್ರ್ಯ ನಂತರ ಹುಟ್ಟಿರುವ ನಮಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಹೋರಾಟ ತಿಳಿದಿಲ್ಲ” ಎಂದರು.
“ಹಲವಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ನಾವು ಸ್ವಾತಂತ್ರ್ಯವನ್ನು ಸಾಧಿಸಿದ್ದೇವೆ. ವ್ಯಾಪಾರಕ್ಕೆ ಬಂದ ಬ್ರಿಟಿಷರು ನಮ್ಮಲ್ಲಿ ಒಗ್ಗಟ್ಟು ಇಲ್ಲ ಎಂಬುದನ್ನು ಅರಿತಕೊಂಡು ನಮ್ಮ ದೇಶದ ವಿರುದ್ಧ ನಮ್ಮವರನ್ನೇ ಬಳಸಿಕೊಂಡರು. ರೈತರು ಸ್ವಾತಂತ್ರ್ಯ ಹೋರಾಟಕ್ಕೆ ಸೈನಿಕರಂತೆ ಬಂದರು. ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಾಗಲೆಲ್ಲ ಅದು ಕ್ರಾಂತಿಯಾಯಿತು. ಇದು ಬ್ರಿಟಿಷ್ ಆಡಳಿತಗಾರರನ್ನು ಬೆಚ್ಚಿಬೀಳಿಸಿತು” ಎಂದು ಅವರು ಹೇಳಿದ್ದಾಋೆ.
ಮನ್ನಣೆ ಪಡೆಯದ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ. ಬೆಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯಗೌಡ ಮತ್ತು ಇತರ ತೆರೆಮರೆಯ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಪ್ರತಿಮೆಯನ್ನು ನಿರ್ಮಾಣ ಮಾಡುವುದಾಗಿ ಅವರು ಭರವಸೆ ನೀಡಿದರು.
“ಇತಿಹಾಸವನ್ನು ಕಲಿಯುವ ಮೂಲಕ. ದೇಶಕ್ಕಾಗಿ ಅವರ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತಿರಬೇಕು. ಅವರು ನಮಗೆ ಸ್ಪೂರ್ತಿಯಾಗಿದ್ದಾರೆ” ಎಂದರು.
ಶಾಲಾ ಪಠ್ಯ ಪುಸ್ತಕಗಳಲ್ಲಿ ಕೆದಂಬಾಡಿ ರಾಮಯ್ಯಗೌಡರ ಅಧ್ಯಾಯವನ್ನು ಸೇರಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.