ನವದೆಹಲಿ: ಏಷ್ಯನ್ ಕಪ್ 2022ರಲ್ಲಿ ಭಾರತದ ಭರವಸೆಯ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರು ಇತಿಹಾಸ ನಿರ್ಮಾಣ ಮಾಡಿದ್ದಾರೆ. ಏಷ್ಯನ್ ಕಪ್ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ.
ಥೈಲ್ಯಾಂಡ್ನ ಬ್ಯಾಂಕಾಕ್ನ ಹುವಾಮಾರ್ಕ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಜಪಾನ್ನ ಹಿನಾ ಹಯಾತಾ ಅವರನ್ನು ಸೋಲಿಸಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮತ್ತು ಎರಡು ಬಾರಿ ಒಲಿಂಪಿಯನ್ ಮಣಿಕಾ ಬಾತ್ರಾ ಅವರು ಶುಕ್ರವಾರ ಏಷ್ಯನ್ ಕಪ್ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಉನ್ನತ ಶ್ರೇಯಾಂಕದ ಚೆನ್ ಸ್ಜು ವಿರುದ್ಧ 4-3 ಗೆಲುವಿನೊಂದಿಗೆ ಸೆಮಿಫೈನಲ್ ತಲುಪಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾದರು.
ಸೆಮಿಫೈನಲ್ನಲ್ಲಿ ಬಾತ್ರಾ ಜಪಾನ್ನ ಮಿಮಾ ಇಟೊ ವಿರುದ್ಧ 2-4 ಅಂತರದಿಂದ ಸೋತಿದ್ದರು. ಹೀಗಾಗಿ ಬೆಳ್ಳಿ ಕನಸಿನಿಂದ ವಂಚಿತರಾದರು.
Manika scripts history 😍 becomes 1⃣st Indian woman to win an Asian Cup 🎖️
Manika Batra stuns World No. 6, 🇯🇵's Hina Hayata 4-2 in 🥉 play-off at the Asian Cup to achieve the feat🔥
Congratulations Champion. All of India is proud of you 🙌 pic.twitter.com/VZ5DlPjVBb
— SAI Media (@Media_SAI) November 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.