ಬೆಂಗಳೂರು: ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಇಂದು ಅದ್ಧೂರಿಯಾಗಿ ನಡೆಯಲಿದೆ. ಸಾವಿರಾರು ಬಸ್ಸು ಮತ್ತು ಇತರ ವಾಹನಗಳಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಗಮಿಸುತ್ತಿದ್ದು, ಬಳ್ಳಾರಿ ನಗರವು ಕೇಸರಿಮಯವಾಗಿ ಪರಿವರ್ತನೆಗೊಂಡಿದೆ. ಪಕ್ಷದ ಪ್ರಮುಖರು ಈಗಾಗಲೇ ಬಳ್ಳಾರಿ ನಗರಕ್ಕೆ ಆಗಮಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತು ಬಳ್ಳಾರಿ ಜಿಲ್ಲೆ ಅಧ್ಯಕ್ಷ ಮುರಹರಿಗೌಡ ಪಾಲ್ಗೊಳ್ಳಲಿದ್ದಾರೆ. ಅತಿಥಿ ಗಣ್ಯರನ್ನು ಸ್ವಾಗತಿಸಲು ಕಲಾ ತಂಡಗಳು ಸಜ್ಜುಗೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.