ನವದೆಹಲಿ: ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇವರು ಪಂಜಾಬ್ ಕೇಡರ್ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ನೇಮಕಾತಿಯನ್ನು ಕಾನೂನು ಮತ್ತು ನ್ಯಾಯ ಸಚಿವರು ಶನಿವಾರ ಸೂಚಿಸಿದ್ದರು.
“ಅರುಣ್ ಗೋಯೆಲ್, ಐಎಎಸ್ (ನಿವೃತ್ತ) ಅವರನ್ನು ಚುನಾವಣಾ ಆಯೋಗದಲ್ಲಿ ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಡುತ್ತಾರೆ, ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ” ಅದು ಪ್ರಕಟನೆ ಹೇಳಿದೆ.
ಭಾರತೀಯ ಚುನಾವಣಾ ಆಯೋಗವು 3 ಆಯುಕ್ತರನ್ನು ಒಳಗೊಂಡ ಬಹು-ಸದಸ್ಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಗೋಯೆಲ್ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ.
ಅರುಣ್ ಗೋಯೆಲ್ ಅವರು ಶುಕ್ರವಾರದಂದು ಭಾರೀ ಕೈಗಾರಿಕೆಗಳ ಕಾರ್ಯದರ್ಶಿ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಸುಶೀಲ್ ಚಂದ್ರ ಅವರು ಈ ವರ್ಷದ ಮೇ ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತರಾಗಿದ್ದು, ಅವರ ಜಾಗಕ್ಕೆ ಗೋಯೆಲ್ ಆಗಮಿಸಿದ್ದಾರೆ.
Delhi | Arun Goel assumes charge as the new Election Commissioner of India. pic.twitter.com/4c85DsILgt
— ANI (@ANI) November 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.