ದೋಹಾ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಕತಾರ್ನ ಅಲ್ ಬೇತ್ ಸ್ಟೇಡಿಯಂನಲ್ಲಿ FIFA ವಿಶ್ವಕಪ್ 2022 ರ ಉದ್ಘಾಟನಾ ಸಮಾರಂಭದಲ್ಲಿ ನಿನ್ನೆ ಭಾಗಿಯಾದರು. ಈ ಸಂದರ್ಭದಲ್ಲಿ ಅವರು ವಿಶ್ವ ನಾಯಕರನ್ನು ಭೇಟಿ ಮಾಡಿದರು.
ನಿನ್ನೆ, ಭಾನುವಾರ ಅವರು ಜಿಬೌಟಿ ಅಧ್ಯಕ್ಷ ಇಸ್ಮಾಯಿಲ್ ಒಮರ್ ಗುಲ್ಲೆಹ್, ಲೈಬೀರಿಯಾದ ಅಧ್ಯಕ್ಷ ಜಾರ್ಜ್ ವೀಹ್, ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್, ಈಕ್ವೆಡಾರ್ ಉಪಾಧ್ಯಕ್ಷ ಆಲ್ಫ್ರೆಡೊ ಬೊರೆರೊ ಮತ್ತು ಲೆಬನಾನ್ ಪ್ರಧಾನಿ ನಜೀಬ್ ಮಿಕಾಟಿ ಅವರನ್ನು ಭೇಟಿಯಾದರು.
ಧಂಖರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, FIFA ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಮತ್ತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಚ್ ಅವರೊಂದಿಗೆ ಸಂವಾದ ನಡೆಸಿದರು.
ಕತಾರ್ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರ ಆಹ್ವಾನದ ಮೇರೆಗೆ ಕತಾರ್ನಲ್ಲಿರುವ ಧಂಖರ್ ಅವರು ಇಂದು ನವೆಂಬರ್ 21 ರಂದು ತಮ್ಮ ಭೇಟಿಯ ಎರಡನೇ ದಿನದಂದು ಭಾರತೀಯ ಸಮುದಾಯದ ಪ್ರಮುಖ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ. ಅವರು ಕತಾರ್ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡಲಿದ್ದಾರೆ. ಅವರು ವಲಸೆ ಭಾರತೀಯ ಕಾರ್ಮಿಕರಿಗಾಗಿ ಕೆಲಸ ಮಾಡುವ ಭಾರತೀಯ ಸಮುದಾಯ ಸಂಸ್ಥೆಗಳ ಸದಸ್ಯರು ಮತ್ತು ‘ರಾಜಸ್ಥಾನ ಪರಿವಾರ್ ಕತಾರ್’ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
Hon'ble Vice President, Shri Jagdeep Dhankhar meeting with world leaders on the sidelines of FIFA World Cup 2022 at the Al Bayt Stadium in Qatar today.@IsmailOguelleh @GeorgeWeahOff @Macky_Sall @ABorreroVega @Najib_Mikati pic.twitter.com/DpMMR4oywF
— Vice President of India (@VPSecretariat) November 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.