ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನನಿಲ್ದಾಣವು ಕರ್ನಾಟಕದ ಮೊದಲ ಹಸಿರು ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದ ಕೆಲವೇ ಕೆಲವು ವಿಮಾನ ನಿಲ್ದಾಣಗಳು ಹಸಿರು ವಿಮಾನ ನಿಲ್ದಾಣದ ಸಾಧನೆ ಮಾಡಿವೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 8 MWp ಗ್ರಿಡ್ ಸಂಪರ್ಕಿತ ಸೋಲಾರ್ ವಿದ್ಯುತ್ ಘಟಕ ಕಾರ್ಯಾರಂಭ ಮಾಡಿದ ಬಳಿಕ ಹಸಿರು ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
“ನಮ್ಮ ಹುಬ್ಬಳ್ಳಿ ವಿಮಾನ ನಿಲ್ದಾಣದ ಹಿರಿಮೆಗೆ ಮತ್ತೊಂದು ಗರಿ. 2030 ರ ವೇಳೆಗೆ ನವೀಕರಿಸಬಹುದಾದ ಇಂಧನದಿಂದ 50% ಇಂಧನವನ್ನು ಉತ್ಪಾದಿಸುವ ಪ್ರಧಾನಿ ನರೇಂದ್ರ ಮೋದಿ ಕನಸನ್ನು ನನಸಾಗಿಸಲು, ಈಗ ಹುಬ್ಬಳ್ಳಿ ವಿಮಾನ ನಿಲ್ದಾಣವು 100% ಹಸಿರು ವಿಮಾನ ನಿಲ್ದಾಣವಾಗಿ ಮಾರ್ಪಟ್ಟಿದೆ, ಏಕೆಂದರೆ ನಮ್ಮ ವಿಮಾನ ನಿಲ್ದಾಣದಲ್ಲಿ 8MWp ಗ್ರಿಡ್ ಸಂಪರ್ಕಿತ ಸೌರ ವಿದ್ಯುತ್ ಸ್ಥಾವರವು ಕಾರ್ಯಾರಂಭಗೊಂಡಿದೆ” ಎಂದಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣವು ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣ ಎಂದು ಹೇಳಲು ನಾವು ಹೆಮ್ಮೆಪಡುತ್ತೇವೆ. ಈ ಸ್ಥಾವರದಿಂದ ಉತ್ಪತ್ತಿಯಾಗುವ ಶಕ್ತಿಯನ್ನು ಹುಬ್ಬಳ್ಳಿಯ ಕೇಂದ್ರ ಸ್ಥಳದಲ್ಲಿರುವ ಗ್ರಿಡ್ಗೆ ನೀಡಲಾಗುತ್ತದೆ ಎಂದಿದ್ದಾರೆ.
One more feather in the cap of our Hubballi Airport.
To achieve the PM @narendramodi ji dream of producing 50% energy from renewable energy by 2030, now Hubballi Airport has become 100% Green Airport as 8MWp Grid Connected Solar Power Plant in our Airport is commissioned. pic.twitter.com/dYvFyx9boP— Pralhad Joshi (@JoshiPralhad) November 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.