ಪಣಜಿ: ಗೋವಾದಲ್ಲಿ ನಡೆಯುತ್ತಿರುವ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಪನೋರಮಾ ಪೃಥ್ವಿ ಕೊಣನೂರು ನಿರ್ದೇಶನದ ಕನ್ನಡ ಚಲನಚಿತ್ರ “ಹದಿನೆಲೆಂಟು” ಪ್ರದರ್ಶನದೊಂದಿಗೆ ಪ್ರಾರಂಭವಾಗಿದೆ
ಈ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್-ಫೀಚರ್ ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ.
ಭಾರತೀಯ ಪನೋರಮಾ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮʻತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭಾಗವಹಿಸಿದ್ದರು. ಭಾರತೀಯ ಪನೋರಮಾ ವಿಭಾಗದಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ಕಾಶ್ಮೀರ ಫೈಲ್ಸ್ ಮತ್ತು ಎಸ್ಎಸ್ ರಾಜಮೌಳಿ ಅವರ ಆರ್ಆರ್ಆರ್ ಪ್ರದರ್ಶಿಸಲಾಗುತ್ತಿದೆ.
ಭಾರತೀಯ ಪನೋರಮಾ ಚಲನಚಿತ್ರಗಳು ನಮ್ಮ ವೈವಿಧ್ಯಮಯ ದೇಶದ ವಿವಿಧ ಭಾಷೆಗಳು, ಪ್ರದೇಶಗಳು ಮತ್ತು ಸಂಸ್ಕೃತಿಗಳನ್ನು ಪ್ರತಿನಿಧಿಸುತ್ತವೆ. ಈ ವಿಭಾಗದಲ್ಲಿ ಕನ್ನಡ, ತೆಲುಗು, ಮಲಯಾಳಂ, ಮರಾಠಿ, ಹಿಂದಿ, ಒಡಿಯಾ, ಮಣಿಪುರಿ, ಮೈಥಿಲಿ, ಮತ್ತು ಇಂಗ್ಲಿಷ್ ಚಲನಚಿತ್ರಗಳನ್ನು ಈ ವರ್ಷ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಐಎಫ್ಎಫ್ಐನಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿರುವ ಚಿತ್ರ ನಿರ್ಮಾಪಕರನ್ನು ಅಭಿನಂದಿಸಿದರು. ಎಲ್ಲಾ ಚಲನಚಿತ್ರಗಳನ್ನು ವೀಕ್ಷಿಸಲು ಸಮಯ ಮೀಸಲಿಟ್ಟಿದ್ದಕ್ಕಾಗಿ ಮತ್ತು ಭಾರತೀಯ ಪನೋರಮಾಕ್ಕಾಗಿ ಅವುಗಳಲ್ಲಿ ಉತ್ತಮವಾದದ್ದನ್ನು ಆಯ್ಕೆ ಮಾಡಿದ್ದಕ್ಕಾಗಿ ಅವರು ಎಲ್ಲಾ ತೀರ್ಪುಗಾರರ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಫೀಚರ್ ಫಿಲ್ಮ್ ಮತ್ತು ನಾನ್ ಫೀಚರ್ ಫಿಲ್ಮ್ಗಳ ತೀರ್ಪುಗಾರರ ಸದಸ್ಯರನ್ನು ಗೌರವಿಸಲಾಯಿತು. ಆರಂಭಿಕ ಚಿತ್ರ “ಹದಿನೆಲೆಂಟು” ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಸಹ ಗೌರವಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.