ನವದೆಹಲಿ: ಸರ್ಕಾರ ನೇಮಿಸಿದ ಐವರು ಸದಸ್ಯರ ತಜ್ಞರ ಸಮಿತಿಯು ಕರ್ನಾಟಕ ನಾಡದೇವಿಯ ಚಿತ್ರವನ್ನು ಅಂತಿಮಗೊಳಿಸಿದೆ. ರಾಜ್ಯದ ಎಲ್ಲಾ ಕಾರ್ಯಗಳಲ್ಲಿ ಈ ಚಿತ್ರವನ್ನು ಬಳಸಲು ಶಿಫಾರಸು ಮಾಡಲಾಗಿದೆ. ಅಲ್ಲದೇ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಪ್ರತಿಮೆಯನ್ನು ಸಹ ಸ್ಥಾಪಿಸಲಾಗುತ್ತಿದೆ.
ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ನೀಡಿದ ಶಿಫಾರಸನ್ನು ಸರ್ಕಾರ ಒಪ್ಪಿಕೊಂಡಿದೆ. ಬೆಂಗಳೂರು ವಿವಿ ಸ್ಥಾಪಿಸಲಾಗುವ ನಾಡದೇವಿ ಪ್ರತಿಮೆ ಇದೇ ಆಗಿರಲಿದೆ ಎಂದು ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಹಲವು ಕಾರ್ಯಕ್ರಮಗಳಲ್ಲಿ ಬಳಸಲಾಗುತ್ತಿದ್ದು, ಒಂದು ನಿರ್ದಿಷ್ಠವಾದ ಚಿತ್ರಕೃತಿಯ ಕೊರತೆಯಿರುವುದನ್ನು ಮನಗಂಡ ಸರ್ಕಾರವು ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು. ಅದರಂತೆ ಅಧಿಕೃತ ಚಿತ್ರ ಅಂತಿಮವಾಗಿದೆ.
A five member experts’ committee appointed by govt has finalised the portrait of #Karnataka naadadevi. Recommended to use this image in all state functions & a statue will also be installed on Jnanabharati campus. pic.twitter.com/uVuPTSWs2W
— Karnataka Development Index (@IndexKarnataka) November 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.