ಬೆಂಗಳೂರು: ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ (UDID) ವಿತರಣೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ, ಇದುವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಗುರುತಿನ ಚೀಟಿ ವಿತರಣೆಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿದೆ ಎಂದಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್ಡ್ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು.
ವಿಶೇಷಚೇತನರು ಕಡ್ಡಾಯವಾಗಿ ಯುಡಿಐಡಿ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಒಮ್ಮೆ ಲಾಗಿನ್ ಆದ ನಂತರ ಯುಡಿಐಡಿ ಕಾರ್ಡ್ ಪಡೆಯುವುದು ಸುಲಭ. ಇದರ ಮೂಲಕ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯುಡಿಐಡಿ ಕಾರ್ಡ್ನಿಂದ ಬ್ಲಾಕ್ ಮತ್ತು ಜಿಲ್ಲಾ ಹಂತ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲಾ ಹಂತದ ಅನುಷ್ಠಾನ ಶ್ರೇಣಿಯಲ್ಲಿ ಫಲಾನುಭವಿಯ ಸೌಲಭ್ಯಗಳನ್ನು ಟ್ರ್ಯಾಕ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಪ್ರತಿಯೊಬ್ಬ ವಿಶೇಷಚೇತನರಿಗೂ ಯುಡಿಐಡಿ ಕಾರ್ಡ್ಗಳನ್ನು ವಿತರಿಸುವುದು ಸರ್ಕಾರದ ಗುರಿಯಾಗಿದ್ದು, ಇದಕ್ಕಾಗಿ ಎಲ್ಲಾ ವಲಯಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.