ವಿಶ್ವಸಂಸ್ಥೆ: ಪ್ರತಿ 11 ನಿಮಿಷಕ್ಕೆ ಒಬ್ಬ ಹೆಣ್ಣು ತನ್ನ ನಿಕಟ ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದಲೇ ಹತ್ಯೆಗೆ ಒಳಪಡುತ್ತಿದ್ದಾಳೆ ಎಂದು ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೇರಸ್ ಹೇಳಿದ್ದಾರೆ.
ವಿಶ್ವ ವ್ಯಾಪಿಯಾಗಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ವ್ಯಾಪಕವಾಗುತ್ತಿದೆ. ಹೀಗಾಗಿ ಎಲ್ಲಾ ದೇಶಗಳು ರಾಷ್ಟ್ರೀಯ ಕ್ರೀಯಾ ಯೋಜನೆ ರೂಪಿಸಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
2026 ರ ವೇಳೆಗೆ ಮಹಿಳಾ ಹಕ್ಕುಗಳ ಸಂಘಟನೆಗಳು ಮತ್ತು ಚಳುವಳಿಗಳಿಗೆ 50 ಪ್ರತಿಶತದಷ್ಟು ಹಣವನ್ನು ಹೆಚ್ಚಿಸಬೇಕು ಎಂದು ವಿಶ್ವ ನಾಯಕರನ್ನು ಅವರು ಒತ್ತಾಯಿಸಿದ್ದಾರೆ.
ನವೆಂಬರ್ 25 ರಂದು ಆಚರಿಸಲಾಗುವ ಮಹಿಳೆಯರ ವಿರುದ್ಧದ ಹಿಂಸಾಚಾರ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ಅವರು ಸಂದೇಶ ನೀಡಿದ್ದು, ಪ್ರತಿ 11 ನಿಮಿಷಗಳಿಗೊಮ್ಮೆ ಒಬ್ಬ ಹುಡುಗಿ ಅಥವಾ ಮಹಿಳೆಯನ್ನು ನಿಕಟ ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಕೊಲ್ಲಲ್ಪಡುತ್ತಿದ್ದಾಳೆ ಎಂದು ಹೇಳಿದ್ದಾರೆ.
ಮಹಿಳೆಯರನ್ನು ಗುರಿಯಾಗಿಸಿಕೊಂಡು ಆನ್ಲೈನ್ ನಿಂದನೆ ಮತ್ತು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಅಪಾಯವನ್ನು ಎತ್ತಿ ತೋರಿಸಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಂತರರಾಷ್ಟ್ರೀಯ ನಾಯಕರಿಗೆ ಕರೆ ನೀಡಿದರು.
ಮಹಿಳೆಯರು ಮತ್ತು ಹುಡುಗಿಯರ ಮೇಲಿನ ದೌರ್ಜನ್ಯವನ್ನು ವಿಶ್ವದ ಅತ್ಯಂತ ವ್ಯಾಪಕವಾದ ಮಾನವ ಹಕ್ಕುಗಳ ಉಲ್ಲಂಘನೆ ಎಂದು ವಿವರಿಸಿದ ಅವರು, ಈ ತಾರತಮ್ಯ, ಹಿಂಸಾಚಾರ ಮತ್ತು ದುರುಪಯೋಗವು ಅರ್ಧದಷ್ಟು ಜನಸಂಖ್ಯೆಯನ್ನು ಹಿಂಸಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.