ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದಿದ್ದು, ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸುವ ಕುರಿತು ಚಿಂತನೆ ನಡೆಸಿದ್ದಾರೆ.
ಬೊಮ್ಮಾಯಿ ಅವರು ಸರ್ಕಾರದ ನಿಲುವು, ವಕೀಲರ ತಂಡ ರಚನೆ ಮತ್ತು ಇದುವರೆಗೆ ಕೈಗೊಂಡ ಕ್ರಮಗಳ ಎಲ್ಲಾ ವಿವರಗಳನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿದ್ದಾರೆ.
ಈ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯುವ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರೊಂದಿಗೆ ಸಭೆ ನಡೆಸಿದರು.
ಬೆಳಗಾವಿ ನಗರ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆಗಳ 865 ಗ್ರಾಮಗಳ ಮೇಲೆ ತನ್ನ ಹಕ್ಕುಗಳನ್ನು ಪ್ರತಿಪಾದಿಸಿ ಮಹಾರಾಷ್ಟ್ರ ಸರ್ಕಾರವು 2004 ರಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಶೀರ್ಘ ವಿಚಾರಣೆಗೆ ಬರಲಿದೆ.
ಕರ್ನಾಟಕ ಸರ್ಕಾರವನ್ನು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶಾಮ್ ದಿವಾನ್, ಉದಯ್ ಹೊಳ್ಳ ಮತ್ತು ಮಾರುತಿ ಜಿರಾಳೆ ಪ್ರತಿನಿಧಿಸುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.