ನವದೆಹಲಿ: ಭಾರತದಲ್ಲಿ ‘ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ರ ವರ್ಷವಿಡೀ ಆಚರಣೆಗೆ ಇಂದು ಪೂರ್ವ ಚಾಲನೆ ನವದೆಹಲಿಯಲ್ಲಿ ನಡೆಯಲಿದೆ. ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ, ಇಬ್ಬರು ಸಚಿವರುಗಳು 2023 ರ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನು ಯಶಸ್ವಿಯಾಗಿ ಆಚರಿಸುವ ಸರ್ಕಾರದ ದೃಷ್ಟಿಕೋನವನ್ನು ಹಂಚಿಕೊಳ್ಳಲಿದ್ದಾರೆ. 60 ಕ್ಕೂ ಹೆಚ್ಚು ದೇಶಗಳ ಹೈಕಮಿಷನರ್ಗಳು ಮತ್ತು ಭಾರತದಲ್ಲಿನ ರಾಯಭಾರಿಗಳು ಪೂರ್ವ ಚಾಲನಾ ಆಚರಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಭಾರತೀಯ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ರ ಯಶಸ್ವಿ ಜಾಗತಿಕ ಆಚರಣೆಗಾಗಿ ಇತರ ರಾಷ್ಟ್ರಗಳೊಂದಿಗೆ ತೊಡಗಿಸಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ.
ಇತ್ತೀಚೆಗೆ ಬಾಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸಿರಿಧಾನ್ಯಗಳ ಪ್ರಯೋಜನಗಳನ್ನು ಎತ್ತಿ ತೋರಿಸಿದರು, ಸಿರಿಧಾನ್ಯ ಜಾಗತಿಕ ಅಪೌಷ್ಟಿಕತೆ ಮತ್ತು ಹಸಿವಿನ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ಹೇಳಿದರು. ಭಾರತವು ನೈಸರ್ಗಿಕ ಕೃಷಿಯನ್ನು ಉತ್ತೇಜಿಸುತ್ತಿದೆ ಮತ್ತು ಸುಸ್ಥಿರ ಆಹಾರ ಭದ್ರತೆಗಾಗಿ ಸಿರಿಧಾನ್ಯದಂತಹ ಪೌಷ್ಟಿಕ ಮತ್ತು ಸಾಂಪ್ರದಾಯಿಕ ಆಹಾರ ಧಾನ್ಯಗಳನ್ನು ಮರು-ಜನಪ್ರಿಯಗೊಳಿಸುತ್ತಿದೆ ಎಂದು ಅವರು ಹೈಲೈಟ್ ಮಾಡಿದ್ದಾರೆ. ಮುಂದಿನ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನು ಅತ್ಯಂತ ಸಂಭ್ರಮದಿಂದ ಆಚರಿಸುವಂತೆ ಅವರು ಮನವಿ ಮಾಡಿದ್ದಾರೆ.
2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಇದರ ಆರೋಗ್ಯ ಪ್ರಯೋಜನಗಳ ಅರಿವನ್ನು ಹೆಚ್ಚಿಸುವುದು ಈ ಉಪಕ್ರಮದ ಪ್ರಾಥಮಿಕ ಗುರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.