ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಹೈ-ವೋಲ್ಟೇಜ್ ಪ್ರಚಾರಕ್ಕೆ ಸಾಕ್ಷಿಯಾಗುತ್ತಿದೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಉನ್ನತ ನಾಯಕರು ಮತದಾರರನ್ನು ತಲುಪಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ ಎರಡನೇ ದಿನ ರಾಜ್ಯದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಅವರು ಮೊಡಸಾ, ಪಾಲನ್ಪುರ್, ದಹೆಗಾಮ್ ಮತ್ತು ಬವ್ಲಾದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ಪಕ್ಷದ ಪದಾಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಗುಜರಾತ್ ಚುನಾವಣೆಗೆ ಭರದ ಪ್ರಚಾರ: ಇಂದು ಮೋದಿ 4 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮತ್ತೊಂದೆಡೆ, ಕಾಂಗ್ರೆಸ್ ಮುಖಂಡ ಮೋಹನ್ ಪ್ರಕಾಶ್ ಕಛ್ನಲ್ಲಿ ಪ್ರಚಾರ ನಡೆಸಲಿದ್ದು, ಪಕ್ಷದ ನಾಯಕ ತಾರಿಕ್ ಅನ್ವರ್ ಭುಜ್ನಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಮುಖಂಡರು ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.
ಗುಜರಾತ್ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ ಒಟ್ಟು 139 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ 17 ಮಹಿಳೆಯರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ 14 ಮತ್ತು ಆಮ್ ಆದ್ಮಿ ಪಕ್ಷ 6 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರೆ ಪಕ್ಷಗಳು 33 ಮಹಿಳೆಯರಿಗೆ ಟಿಕೆಟ್ ನೀಡಿದ್ದು, 56 ಮಹಿಳೆಯರು ಸ್ವತಂತ್ರ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.