ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಲುವಾಗಿ ಡ್ರೋನ್ಗಳ ಮೂಲಕ ಪಾಕಿಸ್ಥಾನ ಶಸ್ತ್ರಾಸ್ತ್ರ ಸಾಗಾಣೆ ಮಾಡುತ್ತಿದೆ. ಇಂದು ಸಾಂಬಾ ಜಿಲ್ಲೆಯ ಗಡಿಯುದ್ದಕ್ಕೂ ಡ್ರೋನ್ನಿಂದ ಬೀಳಿಸಲಾದ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಪಿಸ್ತೂಲ್ಗಳು ಮತ್ತು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಂತರಾಷ್ಟ್ರೀಯ ಗಡಿಯಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ರಾಮಗಢ ಮತ್ತು ವಿಜಯಪುರ ನಡುವೆ ಬೆಳಿಗ್ಗೆ 6.15 ರ ಸುಮಾರಿಗೆ ಸ್ಥಳೀಯ ಜನರು ವಸ್ತುಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಭಿಷೇಕ್ ಮಹಾಜನ್ ಮಾಹಿತಿ ನೀಡಿದ್ದಾರೆ
ಬಾಂಬ್ ನಿಷ್ಕ್ರಿಯ ದಳವು ಡಿಟೋನೇಟರ್ಗಳಿರುವ ಎರಡು ಜೋಡಿಸದ ಐಇಡಿಗಳು, ಎರಡು ಚೈನೀಸ್ ಪಿಸ್ತೂಲ್ಗಳು, 60 ಸುತ್ತಿನ 4 ಮ್ಯಾಗಜೀನ್ಗಳು ಮತ್ತು ರೂ 500 ಮುಖಬೆಲೆಯ ರೂ 5 ಲಕ್ಷವನ್ನು ವಶಪಡಿಸಿಕೊಂಡಿದೆ. ಈ ವಸ್ತುಗಳನ್ನು ಉಕ್ಕಿನ ಬೇಸ್ ಹೊಂದಿರುವ ಮರದ ಪೆಟ್ಟಿಗೆಯಲ್ಲಿ ಮುಚ್ಚಲಾಗಿತ್ತು ಎಂದು ತಿಳಿಸಿದ್ದಾರೆ.
“ಇದು ಗಡಿಯಾಚೆಗಿನ ಡ್ರೋನ್ ಡ್ರಾಪ್ ಪ್ರಕರಣವಾಗಿದೆ. ನಾವು ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಯಾವುದೇ ಅಹಿತಕರ ಘಟನೆಗೆ ಇವುಗಳನ್ನು ಬಳಸಲು ಯೋಜಿಸಲಾಗಿತ್ತು, ಆದರೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದನ್ನು ಪತ್ತೆ ಮಾಡಿದ ಪೊಲೀಸ್ ತಂಡ ಮತ್ತು ಸ್ಥಳೀಯ ಜನರಿಗೆ ಬಹುಮಾನ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.