ನವದೆಹಲಿ: ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆ ಭಾರತಕ್ಕಿದೆ. ಇಂದು ಸಂವಿಧಾನ ದಿನವನ್ನು ದೇಶ ಹೆಮ್ಮೆಯಿಂದ ಆಚರಿಸಿಕೊಳ್ಳುತ್ತಿದೆ.
ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ 1949 ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ 2015 ರಿಂದ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಅಡಿಪಾಯವಾದ ಭಾರತದ ಸಂವಿಧಾನವನ್ನು 26 ಜನವರಿ, 1950 ರಂದು ಜಾರಿಗೊಳಿಸಿದಾಗಿನಿಂದ 106 ಬಾರಿ ತಿದ್ದುಪಡಿ ಮಾಡಲಾಗಿದೆ. ಈ ಅನೇಕ ತಿದ್ದುಪಡಿಗಳು ಭಾರತೀಯ ಸಮಾಜದ ಚಿತ್ರಣವ್ನೇ ಬದಲಿಸಿವೆ.
“ಇಂದು, ಸಂವಿಧಾನದ ದಿನದಂದು, ನಮ್ಮ ಸಂವಿಧಾನವನ್ನು ನಮಗೆ ನೀಡಿದ ಮಹಾನ್ ವ್ಯಕ್ತಿಗಳಿಗೆ ನಾವು ಗೌರವ ಸಲ್ಲಿಸೋಣ ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 10 ಗಂಟೆಗೆ ಸುಪ್ರೀಂಕೋರ್ಟ್ನಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಇ-ಕೋರ್ಟ್ ಯೋಜನೆಯಡಿ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
Today, on Constitution Day, we pay homage to those greats who gave us our Constitution and reiterate our commitment to fulfil their vision for our nation. pic.twitter.com/eKVwA7NdaB
— Narendra Modi (@narendramodi) November 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.