ಭೋಪಾಲ್: ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಪಾಕಿಸ್ಥಾನ ಪರ ಘೋಷಣೆಗಳನ್ನು ಕೂಗಿದ ಕುರಿತು ಬಿಜೆಪಿ ನಾಯಕರು ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬೆಲೆ ಮತ್ತು ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಪರಾಧ ವಿಭಾಗಕ್ಕೆ ನೀಡಿದ ದೂರಿನಲ್ಲಿ, ಕಾಂಗ್ರೆಸ್ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಮಲ್ ನಾಥ್ ಮತ್ತು ಇಡೀ ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ನೆಪದಲ್ಲಿ ದೇಶದಲ್ಲಿ ರಾಷ್ಟ್ರ ವಿರೋಧಿ ಸಂಘಟನೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದೆ.
ದೇಶದ ಶಾಂತಿ ಕದಡಲು ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಗುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಇನ್ನೊಂದೆಡೆ ಶುಕ್ರವಾರ ವಕೀಲ ಅಂಕಿತ್ ಮಿಶ್ರಾ, ಛತ್ತೀಸ್ಗಢದ ಕಾಂಗ್ರೆಸ್ನ ಪದಾಧಿಕಾರಿಯೊಬ್ಬರು ಮಧ್ಯಪ್ರದೇಶದ ಭಾರತ್ ಜೋಡೋ ಪಾದಯಾತ್ರೆಯ ಸಮಯದಲ್ಲಿ ಎದ್ದ ‘ಪಾಕಿಸ್ತಾನ ಪರ’ ಘೋಷಣೆಗಳ ವೀಡಿಯೊವನ್ನು ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶ ಬಿಜೆಪಿ ನಾಯಕ ಲೋಕೇಶ್ ಪರಾಶರ್ ವಿರುದ್ಧ ರಾಯ್ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ನವೆಂಬರ್ 25 ರಂದು ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್ ಅವರು ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಮಧ್ಯಪ್ರದೇಶದ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಪಾಕಿಸ್ಥಾನದ ಪರ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಹೇಳಲಾದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.