ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಚಾರ ಕೊನೆಗೊಳ್ಳಲಿದೆ. ಎಲ್ಲ ರಾಜಕೀಯ ಪಕ್ಷಗಳೂ ಮತದಾರರನ್ನು ಓಲೈಸಲು ಸರ್ವ ಪ್ರಯತ್ನ ಮಾಡುತ್ತಿವೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದಾಹೋದ್, ಖೇಡಾ ಮತ್ತು ಅಹಮದಾಬಾದ್ ಜಿಲ್ಲೆಗಳಲ್ಲಿ ಚುನಾವಣಾ ಸಮಾವೆಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹೊಸ ವಿಧಾನಸಭೆಯನ್ನು ಆಯ್ಕೆ ಮಾಡಲು ಗುಜರಾತ್ನಲ್ಲಿ ಎರಡು ಹಂತದ ಚುನಾವಣೆಗಳು ನಡೆಯುತ್ತಿವೆ. ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ಮತ್ತು ಎರಡನೇ ಹಂತದ ಮತದಾನ 5 ರಂದು ನಡೆಯಲಿದೆ.
ವರದಿಗಳ ಪ್ರಕಾರ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಡೋದರಾದಲ್ಲಿ ಎರಡು ಮತ್ತು ದಾಹೋದ್ನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ವಡೋದರಾದಲ್ಲಿ ಮತ್ತು ಗೋಧರಾದಲ್ಲಿ ರೋಡ್ ಶೋ ಸೇರಿದಂತೆ ಮೂರು ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಗಾಂಧಿಧಾಮದಲ್ಲಿ ಮಹಿಳಾ ಸಮ್ಮೇಳನ ಹಾಗೂ ರೋಡ್ ಶೋ ನಡೆಸಲಿದ್ದಾರೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಇತರ ಬಿಜೆಪಿ ನಾಯಕರು ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ.
ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ಲಿಮ್ಡಿ, ವಿರಾಮಗಾಮ್ ಮತ್ತು ಭವನಗರ ಸೇರಿದಂತೆ ಐದು ಸ್ಥಳಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.