ಬೆಳ್ತಂಗಡಿ : ಕ್ಷಣಿಕ ಸುಖ – ಸಂತೋಷಕ್ಕಾಗಿ, ಮೋಜಿಗಾಗಿ ವ್ಯಕ್ತಿತ್ವ ಹಾಗೂ ಮಾನವೀಯತೆಯನ್ನು ಕಳೆದುಕೊಳ್ಳಬಾರದು. ಬದ್ಧತೆ ಹಾಗೂ ಪ್ರಾಮಾಣಿಕತೆಯೊಂದಿಗೆ ವೃತ್ತಿ ಪ್ರೀತಿ ಮತ್ತು ವೃತ್ತಿ ಗೌರವ ಬೆಳೆಸಿಕೊಳ್ಳಬೇಕು ಎಂಜಿನಿಯರ್ಗಳು ಕೌಶಲವರ್ಧನೆಯೊಂದಿಗೆ ತ್ಯಾಗ ಮತ್ತು ನಿಸ್ವಾರ್ಥ ಮನೋಭಾವದಿಂದ ತಾವು ಕೆಲಸ ಮಾಡುವ ಸಂಸ್ಥೆಯ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಬೇಕು. ಪ್ರಗತಿಯ ಪಾಲುದಾರರಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಉಜಿರೆಯಲ್ಲಿ ಶನಿವಾರ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ 12ನೇರಾಜ್ಯಮಟ್ಟದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ನೇತೃತ್ವದಲ್ಲಿ ನಡೆಸುವ ವಿದ್ಯಾಸಂಸ್ಥೆಗಳಲ್ಲಿ ಮಾನವ ಯಂತ್ರಗಳನ್ನು ರೂಪಿಸುವ ಬದಲು ಸೇವಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಲಾಗುತ್ತದೆ. ಆದರ್ಶ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.
ಗುರು – ಹಿರಿಯರೊಂದಿಗೆ ಗೌರವದಿಂದ ಹಾಗೂ ಸಹೋದ್ಯೋಗಿಗಳೊಂದಿಗೆ ಪ್ರೀತಿ – ವಿಶ್ವಾಸದಿಂದ ಬೆರೆತು ಸಂಸ್ಥೆಯ ಪ್ರಗತಿಗೆ ಶ್ರಮಿಸಬೇಕು. ಮಾನವೀಯ ಮೌಲ್ಯಗಳೊಂದಿಗೆ ಸುಖ – ಸಂತೋಷದಿಂದ ಬದುಕನ್ನು ಪ್ರೀತಿಸಿ, ಅನುಭವಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ, ಪ್ರೊ. ಪ್ರಸಾದ್ ಮತ್ತು ಡಾ. ಬಸವ ಟಿ ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ ಸುಬ್ರಾಯ ಶುಭಾಶಂಸನೆ ಮಾಡಿದರು. ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸುರೇಶ್ ಸ್ವಾಗತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.