ಬೆಂಗಳೂರು: ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.