ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣನಿಗೆ ಹೋಲಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಟೀಕಿಸಿದ್ದಾರೆ.
“ಇದು ಖಂಡನೀಯ ಹೇಳಿಕೆ, ಕಾಂಗ್ರೆಸ್ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಪ್ರಧಾನಿ ಮೋದಿಯವರಿಗೆ ಮಾತ್ರವಲ್ಲ, ಇದು ಪ್ರತಿ ಗುಜರಾತಿಗೆ, ಗುಜರಾತ್ ರಾಜ್ಯಕ್ಕೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.
ಗುಜರಾತಿನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ ಅವರು, ಪ್ರಧಾನಿ ಮೋದಿಯನ್ನು ರಾವಣನಿಗೆ ಹೋಲಿಸಿ, ಪ್ರತಿ ಚುನಾವಣೆಯಲ್ಲೂ ಅವರು ಕಾಣುತ್ತಾರೆ ಎಂದು ಹೇಳಿದ್ದರು. ಈ ಹೇಳಿಕೆ ವಿವಾದ ಸೃಷ್ಟಿಸಿದ್ದು, ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿತ್ತು.
ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ರಮವಾಗಿ ಭಾವನಗರ ಮತ್ತು ಗಾಂಧಿಧಾಮ್ನಲ್ಲಿ ಮಂಗಳವಾರ ಮೊದಲ ಹಂತದಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಮೊದಲ ಹಂತದಲ್ಲಿ ಸ್ಪರ್ಧಿಸುವ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಪಡೆಯಲು ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.