ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಪರವಾಗಿ ಸಮರ್ಥ ವಾದ ನಡೆಯುವ ಭರವಸೆ ಇದೆ ಎಂದು ಹೇಳಿದ್ದಾರೆ.
ಕರ್ನಾಟಕದ ಪರವಾಗಿ ವಕೀಲ ಮುಕುಲ್ ರೊಹಟಗಿ ಅವರು ವಾದ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಅವರನ್ನು ಭೇಟಿಯಾಗಿದ್ದಾರೆ.
ಭೇಟಿಯ ಬಳಿಕ ಮಾತನಾಡಿದ ಸಿಎಂ, “ಮುಕುಲ್ ರೊಹಟಗಿ ಅವರು ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧ ಪಟ್ಟ ಹಾಗೆ ಎಲ್ಲಾ ವಿಷಯಗಳನ್ನು ಈಗಾಗಲೇ ನಮ್ಮ ಅಡ್ವೊಕೇಟ್ ಜನರಲ್ ವಿರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೊಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.