ಅಮೃತಸರ: ಪಾಕಿಸ್ಥಾನದಿಂದ ಭಾರತಕ್ಕೆ 3.1 ಕೆಜಿ ಮಾದಕ ದ್ರವ್ಯ ಹೊತ್ತು ಬರುತ್ತಿದ್ದ ಡ್ರೋಣ್ ಅನ್ನು ಹೊಡೆದುರುಳಿಸುವ ಮೂಲಕ ಪಂಜಾಬ್ನ ಅಮೃತಸರ ಜಿಲ್ಲೆಯಲ್ಲಿ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಯತ್ನವನ್ನು ಬಿಎಸ್ಎಫ್ ಮಹಿಳಾ ಪಡೆ ವಿಫಲಗೊಳಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ 11.05 ಗಂಟೆಗೆ ಡ್ರೋನ್ ಅಮೃತಸರ ನಗರದ ಉತ್ತರಕ್ಕೆ 40 ಕಿಮೀ ದೂರದಲ್ಲಿರುವ ಚಹರ್ಪುರ ಗ್ರಾಮದ ಬಳಿ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸುವುದನ್ನು ಗಮನಿಸಿದ ಸೈನಿಕರು ಅದರತ್ತ ಗುಂಡು ಹಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶೋಧ ಕಾರ್ಯಾಚರಣೆಯ ಸಮಯದಲ್ಲಿ ಬಿಎಸ್ಎಫ್ ಭಾಗಶಃ ಹಾನಿಗೊಳಗಾದ ಹೆಕ್ಸಾಕಾಪ್ಟರ್ ಅನ್ನು ವಶಪಡಿಸಿಕೊಂಡಿತು, ಆರು ರೋಟರ್ಗಳನ್ನು ಹೊಂದಿರುವ ಮಾನವರಹಿತ ವೈಮಾನಿಕ ವಾಹಕ ಇದಾಗಿದೆ.
18 ಕೆಜಿ ತೂಕದ ಡ್ರೋನ್ 3.11 ಕೆಜಿ ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿತ್ತು, ಅದರ ಕೆಳಗೆ ಜೋಡಿಸಲಾದ ಬಿಳಿ ಪಾಲಿಥಿನ್ನಲ್ಲಿ ಇದನ್ನು ಸುತ್ತಲಾಗಿತ್ತು ಎಂದು ಬಿಎಸ್ಎಫ್ ತಿಳಿಸಿದೆ.
ನವೆಂಬರ್ 25 ರಂದು ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.