ನವದೆಹಲಿ: ಸರ್ಕಾರಿ ಇ-ಮಾರ್ಕೆಟ್ ಪ್ಲೇಸ್ GeM ಪ್ಲಾಟ್ಫಾರ್ಮ್ 2022-2023 ರ ಆರ್ಥಿಕ ವರ್ಷಕ್ಕೆ ನವೆಂಬರ್ 29ರವರೆಗೆ 1 ಲಕ್ಷ ಕೋಟಿ ರೂಪಾಯಿಗಳ ಒಟ್ಟು ಸರಕು ಮೌಲ್ಯವನ್ನು ದಾಟಿದೆ.
GeM ಭಾರತದಲ್ಲಿ ಸಾರ್ವಜನಿಕ ಖರೀದಿಗಾಗಿನ ಆನ್ಲೈನ್ ಪ್ಲಾಟ್ಫಾರ್ಮ್ ಆಗಿದೆ, ಇದನ್ನು ಸರ್ಕಾರಿ ಖರೀದಿದಾರರಿಗೆ ಮುಕ್ತ ಮತ್ತು ಪಾರದರ್ಶಕ ಖರೀದಿ ವೇದಿಕೆಯನ್ನು ರಚಿಸುವ ಉದ್ದೇಶದಿಂದ ಆಗಸ್ಟ್ 2016 ರಲ್ಲಿ ಪ್ರಾರಂಭಿಸಲಾಯಿತು.
ಭಾರತೀಯ ಉದ್ಯಮಶೀಲತೆಯ ಉತ್ಸಾಹವನ್ನು ಪ್ರದರ್ಶಿಸಲು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ವಿಷಯದಲ್ಲಿ GeM ಒಂದು ಗೇಮ್ ಚೇಂಜರ್ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದು, ಅದರ ಮಹತ್ವದ ಸಾಧನೆಯನ್ನು ಅತ್ಯುತ್ತಮ ಸುದ್ದಿ ಎಂದು ಕರೆದಿದ್ದಾರೆ.
ಈ ವೇದಿಕೆಯಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತಿರುವ ಎಲ್ಲರನ್ನು ಶ್ಲಾಘಿಸಿದ ಮೋದಿ, ಇತರರು ಕೂಡ ವೇದಿಕೆಯನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಪ್ರಧಾನ ಮಂತ್ರಿಯವರ ಪ್ರಜಾಪ್ರಭುತ್ವ ಮಾದರಿಯ ಮತ್ತು ಪಾರದರ್ಶಕ ಸಾರ್ವಜನಿಕ ಸಂಗ್ರಹಣೆಯ ದೃಷ್ಟಿಕೋನವು ವ್ಯವಹಾರಗಳಿಗೆ ವಿಶೇಷವಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ವಿಶ್ವಾಸಾರ್ಹ ಪಾಲುದಾರರಾಗಿ ಹೊರಹೊಮ್ಮಿದ ವೇದಿಕೆಯನ್ನು ಸೃಷ್ಟಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
Excellent news! @GeM_India is a game changer when it comes to showcasing India’s entrepreneurial zeal and furthering transparency. I laud all those who are displaying their products on this platform and urge others to do the same. https://t.co/O2gioaxxrL
— Narendra Modi (@narendramodi) November 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.