ಅಹ್ಮದಾಬಾದ್: ಗುಜರಾತಿನಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಡಿಸೆಂಬರ್ 1ರ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 5.30ಕ್ಕೆ ಮುಕ್ತಾಯವಾಗಲಿದೆ.
ಈ ಹಂತದಲ್ಲಿ ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳ 19 ಜಿಲ್ಲೆಗಳಲ್ಲಿ ಹರಡಿರುವ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಾಜಿ ಸಚಿವರಾದ ಜಿತು ಭಾಯಿ ವಘಾನಿ, ಹರ್ಷ ಸಾಂಘವಿ, ಕನುಭಾಯಿ ದೇಸಾಯಿ, ರಾಘವ್ ಜಿ ಪಟೇಲ್, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾ ಬಾ ಜಡೇಜಾ, ಹಿರಿಯ ಕಾಂಗ್ರೆಸ್ ನಾಯಕರಾದ ಅರ್ಜುನ್ ಮೊರ್ವಾಧಿಯಾ, ಪರೇಶ್ ಧನಾನಿ, ಇಂದ್ರನೀಲ್ ರಾಜ್ಯಗುರು, ಎಎಪಿಯ ಸಿಎಂ ಅಭ್ಯರ್ಥಿ ಇಸುದನ್ ಗಧ್ವಿ, ಗೋಪಾಲ್ ಪಕ್ಷದ ರಾಜ್ಯಾಧ್ಯಕ್ಷ ಗೋಪಾಲ್ ಇತ್ಸ್ವಿ ಈ ಹಂತದ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.