ನವದೆಹಲಿ: ‘ಪರೀಕ್ಷಾ ಪೇ ಚರ್ಚಾ’ 2023 ಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒತ್ತಡ ರಹಿತ ವಾತಾವರಣ ರಚಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರ ಒತ್ತಿ ಹೇಳಿದ್ದಾರೆ.
ಶಿಕ್ಷಣ ಸಚಿವಾಲಯದ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದು, “ಎಲ್ಲ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರಿಗೆ ಪರೀಕ್ಷಾ ಪೇ ಚರ್ಚಾ 2023 ಗೆ ಸಂಬಂಧಿಸಿದ ಈ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ನಾನು ಕರೆ ನೀಡುತ್ತೇನೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ ಮುಕ್ತ ವಾತಾವರಣವನ್ನು ರಚಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ” ಎಂದಿದ್ದಾರೆ.
‘ಪರೀಕ್ಷಾ ಪೇ ಚರ್ಚಾ’ ಎಂಬುದು ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರಧಾನಮಂತ್ರಿಯವರು ಪರೀಕ್ಷೆಯ ಒತ್ತಡ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಮ್ಮ ವಿಶಿಷ್ಟವಾದ ಆಕರ್ಷಕ ಶೈಲಿಯಲ್ಲಿ ನೇರ ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸುತ್ತಾರೆ.
ಕಳೆದ ವರ್ಷ ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ‘ಪರೀಕ್ಷಾ ಪೇ ಚರ್ಚಾ’ದ ಐದನೇ ಆವೃತ್ತಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳೊಂದಿಗೆ ಸಂವಾದ ನಡೆಸಿದ್ದರು.
ಉತ್ತಮ ಅಂಕಗಳನ್ನು ಗಳಿಸಲು ಶಿಕ್ಷಕರು ಮತ್ತು ಪೋಷಕರಿಂದ ವಿದ್ಯಾರ್ಥಿಗಳು ಒತ್ತಡ ಹೇರಬಾರದು. ಪಾಲಕರು ಮತ್ತು ಶಿಕ್ಷಕರ ನನಸಾಗದ ಕನಸುಗಳನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಬಾರದು. ಮಕ್ಕಳು ತಮ್ಮ ಭವಿಷ್ಯವನ್ನು ಮುಕ್ತವಾಗಿ ನಿರ್ಧರಿಸಲು ಮತ್ತು ಅವರ ಕನಸುಗಳನ್ನು ಅನುಸರಿಸಲು ಅವರಿಗೆ ಅವಕಾಶ ನೀಡಬೇಕು ಎಂದು ಕಳೆದ ವರ್ಷ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಪ್ರಧಾನಿ ಮೋದಿ ಹೇಳಿದ್ದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬಹುದು.
I call upon all #ExamWarriors, their parents and teachers to take part in these interesting activities relating to Pariksha Pe Charcha 2023. Let us collectively work towards creating a stress free environment for our students. #PPC2023 https://t.co/ovubThyvP1
— Narendra Modi (@narendramodi) November 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.