ಬೆಂಗಳೂರು: 2023-24ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಹು ಆಯ್ಕೆ ಮಾದರಿಫಲಿತಾಂಶವನ್ನು ಪ್ರಶ್ನೆಗಳನ್ನು ಪರಿಚಯಿಸಲು ಚಿಂತನೆ ನಡೆಸಲಾಗುತ್ತಿದೆ. ಪ್ರಮುಖವಾಗಿ ದ್ವಿತೀಯ ಪಿಯುಸಿ ಪರೀಕ್ಷಾ ಉತ್ತಮಗೊಳಿಸುವ ದೃಷ್ಟಿಯಿಂದ ಈ ಚಿಂತನೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿದೆ.
ಈ ಸಂಬಂಧ ಮಂಗಳವಾರ ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯ ಪಿಯು ಇಲಾಖೆಯ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಸಭೆಯಲ್ಲಿ ಹಾಜರಿದ್ದ ಕೆಲವು ಹಿರಿಯ ಅಧಿಕಾರಿಗಳು ಪಿಯು ಫಲಿತಾಂಶ ಉತ್ತಮಪಡಿಸಲು ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸಲು ಪ್ರಸ್ತಾಪಿಸಿದ್ದಾರೆ. ಬಹು ಆಯ್ಕೆ ಮಾದರಿಯನ್ನು ಕೇವಲ ದ್ವಿತೀಯ ಪಿಯುಗೆ ಮಾತ್ರವಲ್ಲದೆ ಪ್ರಥಮ ಪಿಯು ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲು ಆಲೋಚಿಸಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.