News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜನವರಿಯಿಂದ ಗ್ರಾಮೀಣ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ

ಬೆಂಗಳೂರು: ಗ್ರಾಮೀಣ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಜನವರಿಯಿಂದಲೇ ವೈದ್ಯಕೀಯ ಸೇವೆ ನೀಡಲು ಸಜ್ಜಾಗುತ್ತಿದೆ.

ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ಗ್ರಾಮೀಣ ಪ್ರದೇಶದಲ್ಲಿ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಪ್ರಾಯೋಗಿಕವಾಗಿ ಬೀದರ್, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದೆ. ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಯೋಜನೆಯ ಯಶಸ್ಸನ್ನು ಆಧರಿಸಿ ಅಂತಹ ಹಂತವಾಗಿ ಯೋಜನೆ ಬೇರೆ ಜಿಲ್ಲೆಗಳಿಗೂ ವಿಸ್ತರಣೆ ಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಗ್ಯ ವಾಹಿನಿ ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯೊಂದಿಗೆ ಆರೋಗ್ಯ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಇದಕ್ಕಾಗಿ ಸಂಸ್ಥೆಯು ಇಲಾಖೆಗೆ ನಾಲ್ಕು ವಾಹನಗಳನ್ನು ನೀಡಿದೆ. ಇವುಗಳಿಗೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲು ಟೆಂಡರ್ ಆಹ್ವಾಸುವ ಪ್ರಕ್ರಿಯೆ ನಡೆಸಲಾಗುತ್ತಿದೆ ‌ ವಾಹನಗಳು ವೈದ್ಯಕೀಯ ಉಪಕರಣಗಳೊಂದಿಗೆ ಸಜಾದ ಕೂಡಲೇ ಸಂಚಾರಿ ಕ್ಲಿನಿಕ್ ಸೇವೆ ಆರಂಭವಾಗಲಿದೆ. ಇದಕ್ಕಾಗಿ ಸರ್ಕಾರಿ ಮತ್ತು ವೈದ್ಯಕೀಯ ಕಾಲೇಜುಗಳ ವೈದ್ಯರು ಮತ್ತು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top