ನವದೆಹಲಿ: ಡೆಂಗಿ ಜ್ವರಕ್ಕೆ ತಮ್ಮ ಮಗ ಬಲಿಯಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ದಂಪತಿಗಳು ನಾಲ್ಕು ಮಹಡಿಯ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.
ಈ ದಂಪತಿಯ ಏಕೈಕ ಪುತ್ರನಾಗಿದ್ದ ಅವಿನಾಶ್ ಡೆಂಗಿ ಜ್ವರದಿಂದ ಬಳಲುತ್ತಿದ್ದ, ಈತನನ್ನು ಎರಡು ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸಿದ್ದವು. ಬಳಿಕ ಬಾಲಕ ಸೆ.8ರಂದು ಸಾವಿಗೀಡಾಗಿದ್ದ.
ಇದೇ ನೋವಲ್ಲಿದ್ದ ದಂಪತಿ ಪರಸ್ಪರ ಬಟ್ಟೆ ಕಟ್ಟಿಕೊಂಡು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾರೆ.
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ‘ಇದೊಂದು ಮನಕಲಕುವ ಘಟನೆಯಾಗಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದಿದ್ದಾರೆ. ಅಲ್ಲದೇ ಆಸ್ಪತ್ರೆಗಳಿಗೆ ಷೋಕಾಸು ನೋಟಿಸ್ ನೀಡಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.