News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಅನುದಾನ: ಸಿಎಂ

ಬೆಳಗಾವಿ: ಕನ್ನಡಿಗರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗಡಿ  ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ  ಮಾತನಾಡಿದ ಅವರು, ಸರ್ಕಾರ ಜನಪ್ರಿಯವಾದರೆ ಸಾಲದು. ಜನಪರ ಸರ್ಕಾರವೂ ಬೇಕಾಗುತ್ತದೆ. ಜನಪರ ಸರ್ಕಾರ ಇದ್ದಾಗ ಮಾತ್ರ ತಾಲೂಕಿನ ಕಡೆಯ ಜನರಿಗೆ ಅಭಿವೃದ್ಧಿ ಆಗುತ್ತದೆ ಎಂದರು.

ಗಡಿ ಭಾಗದ ಸಮಸ್ತ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ್ದೇವೆ. ಜಲ ಜೀವನ ಮಿಷನ್ ಅಡಿಯಲ್ಲಿ ಈ ವರ್ಷ ಗಡಿ ಭಾಗದ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ. ಕನ್ನಡಿಗರ ಹಿತ ಚಿಂತನೆ ಮಾಡುವ, ರಕ್ಷಣೆ ಮಾಡುವ, ಅಭಿವೃದ್ಧಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

75 ವರ್ಷಗಳಲ್ಲಿ ಆಗದೆ ಇರುವ ಕೆಲಸಗಳನ್ನು ನಾವು ಎರಡು ವರ್ಷದ ಕೋವಿಡ್‌ ಅವಧಿಯಲ್ಲಿ ಮಾಡಿ ತೋರಿಸಿದ್ದೇವೆ. ಆಕ್ಸಿಜನ್ ಕೊರತೆ ಆಗಿತ್ತು. ಅದನ್ನೂ ಸರಿಯಾಗಿ ನಿರ್ವಹಿಸಿದ್ದೇವೆ. ಕೋವಿಡ್ ಸುರಕ್ಷಾ ಚಕ್ರ ಒದಗಿಸಿದ್ದೇವೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top