News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತಮಿಳುನಾಡು ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.

ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮದ ಉದ್ದೇಶವು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಜನರಿಗೆ ತೊಂದರೆಯಾಗದಂತೆ ದೇವಸ್ಥಾನಗಳಲ್ಲಿ ಫೋನ್ ಇಡುವ ಲಾಕರ್‌ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಆದೇಶದ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದಿದೆ.

ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ. ಮೊಬೈಲ್ ಫೋನ್‌ಗಳು ಜನರ ಗಮನವನ್ನು ಬೇರೆಡೆ ಸೆಳೆಯುತ್ತವೆ ಮತ್ತು ದೇವರ ಚಿತ್ರಗಳನ್ನು ಕ್ಲಿಕ್ಕಿಸುವುದು ಆಗಮ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಛಾಯಾಗ್ರಹಣವು ದೇವಾಲಯಗಳ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ, ಜೊತೆಗೆ ತಮ್ಮ ಒಪ್ಪಿಗೆಯಿಲ್ಲದೆ ಬೇರೆಯವರು ತಮ್ಮ ಚಿತ್ರಗಳನ್ನು ಕ್ಲಿಕ್ ಮಾಡುತ್ತಾರೆ ಎಂಬ  ಭಯ ಮಹಿಳೆಯರನ್ನು ಕಾಡುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top