News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗುಜರಾತ್‌ ಚುನಾವಣೆ: ಕೊನೆಯ ಹಂತದ ಮತದಾನ ಆರಂಭ

ಅಹ್ಮದಾಬಾದ್: ಗುಜರಾತಿನಲ್ಲಿ ಎರಡನೇ ಹಾಗೂ ಅಂತಿಮ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.

ಅಹಮದಾಬಾದ್, ವಡೋದರಾ, ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 69 ಮಹಿಳೆಯರು ಸೇರಿದಂತೆ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅವರ ಏಳು ಸಂಪುಟ ಸಹೋದ್ಯೋಗಿಗಳು ಕಣದಲ್ಲಿರುವ ಪ್ರಮುಖರು.

ಕಣದಲ್ಲಿರುವ ಇತರ ಬಿಜೆಪಿ ನಾಯಕರಲ್ಲಿ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಸೇರಿದ್ದಾರೆ. ಕಾಂಗ್ರೆಸ್ ನಾಯಕರಾದ ಸುಖರಾಮ್ ರಥಾವ ಮತ್ತು ಜಿಗ್ನೇಶ್ ಮಾವಾನಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರಾದ ಭರತ್ ಸಿಂಗ್ ವಖಾಲಾ ಮತ್ತು ಭೀಮಾ ಭಾಯಿ ಚೌಧರಿ ಕೂಡ ಈ ಹಂತದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವಿಸ್ತಾರವಾದ ವ್ಯವಸ್ಥೆಯನ್ನು ಮಾಡಿದೆ. 26 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪಿ.ಭಾರತಿ ಜನತೆಗೆ ಮನವಿ ಮಾಡಿದ್ದಾರೆ.

ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top