News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ನೇಹಿತ ಮೋದಿ ಮೇಲೆ ಸಂಪೂರ್ಣ ನಂಬಿಕೆ ಇದೆ: ಫ್ರೆಂಚ್‌ ಅಧ್ಯಕ್ಷ

ನವದೆಹಲಿ: ಭಾರತ ಜಿ 20 ಅಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು, ಭಾರತದ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟ್ವಿಟ್‌ ಮಾಡಿರುವ ಮ್ಯಾಕ್ರನ್ ಅವರು, ನಮ್ಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರು ಶಾಂತಿ ಮತ್ತು ಸುಸ್ಥಿರ ಜಗತ್ತನ್ನು ಸ್ಥಾಪಿಸಲು ಎಲ್ಲರನ್ನು ಒಂದುಗೂಡಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್ ಮಾಡಿ, “ಒಂದು ಭೂಮಿ. ಒಂದು ಕುಟುಂಬ. ಒಂದು ಭವಿಷ್ಯ. ಭಾರತವು G20ಭಾರತದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ನನ್ನ ಸ್ನೇಹಿತ ನರೇಂದ್ರ ಮೋದಿ ಶಾಂತಿ ಮತ್ತು ಹೆಚ್ಚು ಸುಸ್ಥಿರ ಜಗತ್ತನ್ನು ನಿರ್ಮಿಸಲು ನಮ್ಮನ್ನು ಒಟ್ಟಿಗೆ ಸೇರಿಸಲಿದ್ದಾರೆ ಎಂದು ನಾನು ನಂಬುತ್ತೇನೆ” ಎಂದಿದ್ದಾರೆ.

ಡಿಸೆಂಬರ್ 2 ರ ಶುಕ್ರವಾರದಂದು ಭಾರತವು ಜಿ 20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಟ್ವೀಟ್ ಮಾಡಿ, “ಭಾರತವು ಜಿ20 ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಮತ್ತು ಭಾರತದ ಜನತೆಗೆ ಅಭಿನಂದನೆಗಳು. ರಾಜತಾಂತ್ರಿಕತೆ ಮತ್ತು ಮಾತುಕತೆಯನ್ನು ಉತ್ತೇಜಿಸಲು ಮತ್ತು ಒಮ್ಮತವನ್ನು ನಿರ್ಮಿಸಲು ಮತ್ತು  ಸಮಸ್ಯೆಗಳಿಗೆ ನಿರಂತರ ಪರಿಹಾರಗಳನ್ನು ಕಂಡುಕೊಳ್ಳಲು ಭಾರತದ ನಾಯಕತ್ವದಲ್ಲಿ ನನಗೆ ಸಂಪೂರ್ಣ ವಿಶ್ವಾಸವಿದೆ” ಎಂದಿದ್ದಾರೆ

ಇದಕ್ಕೂ ಮೊದಲು ಡಿಸೆಂಬರ್ 1 ರಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಜಿ 20 ಅಧ್ಯಕ್ಷರಾಗಿ ಭಾರತಕ್ಕೆ ಯಶಸ್ಸನ್ನು ಹಾರೈಸಿದ್ದಾರೆ. ಅಲ್ಬನೀಸ್ ಟ್ವೀಟ್ ಮಾಡಿ,”ಭಾರತವು ಜಿ 20 ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೇಲೆ ನರೆಂದ್ರ ಮೋದಿ ಅವರಿಗೆ ಪ್ರತಿ ಕಾರ್ಯದಲ್ಲೂ ಯಶಸ್ಸನ್ನು ಬಯಸುತ್ತೇನೆ” ಎಂದಿದ್ದಾರೆ.

ಭಾರತವು ಜಿ 20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು. ಅಂತಾರಾಷ್ಟ್ರೀಯ ಸಮುದಾಯ ಎದುರಿಸುತ್ತಿರುವ ವಿವಿಧ ಸವಾಲುಗಳನ್ನು ಎದುರಿಸಲು ಪ್ರಧಾನಿ ಮೋದಿಯವರೊಂದಿಗೆ ಕೆಲಸ ಮಾಡಲು  ಎದುರು ನೋಡುವುದಾಗಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top