News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 2nd February 2023


×
Home About Us Advertise With s Contact Us

ಹಿರಿಯ ನಾಗರಿಕರಿಗೆ ಕನ್ನಡಕ ಯೋಜನೆ ಜಾರಿ: ಸಿಎಂ

ಬೆಂಗಳೂರು: ಹಿರಿಯ ನಾಗರಿಕರನ್ನು ಕಣ್ಣಿನ ತಪಾಸಣೆಗೊಳಪಡಿಸಿ ಕನ್ನಡ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. 60ಕ್ಕೂ ಹೆಚ್ಚಿನ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ, 12 ಹೊಸ ಕ್ಯಾನ್ಸರ್ ಚಿಕಿತ್ಸ ಕೇಂದ್ರ ಮತ್ತು ಡಿಸೆಂಬರ್ ನಲ್ಲಿ 437 ನಮ್ಮ ಕ್ಲೀನಿಕ್ ಪ್ರಾರಂಭಿಸಲಾಗುತ್ತದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟವರ ಕಣ್ಣು ತಪಾಸಣೆ ನಡೆಸಿ ಕನ್ನಡಕ ವಿತರಿಸುವ ವಿನೂತನ ಯೋಜನೆಯನ್ನು ಕೂಡ ಶೀಘ್ರದಲ್ಲಿ ಪ್ರಾರಂಭಿಸುತ್ತೇವೆ ಎಂದಿದ್ದಾರೆ.

“ಈ ವರ್ಷ ಒಂದು ಕೋಟಿಗೂ ಅಧಿಕ ಜನರಿಗೆ ಆಯುಷ್ಮಾನ್ ಕಾರ್ಡ್ ಕೊಡಲಾಗುತ್ತಿದೆ. ಹುಬ್ಬಳ್ಳಿಯಲ್ಲಿ 360 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆ ಶಾಖೆ ಕಟ್ಟಡಕ್ಕೆ ಮುಂದಿನ ತಿಂಗಳು ಅಡಿಪಾಯ ಹಾಕಲಾಗುವುದು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top