News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೊಬಿಲಿಟಿ ಪಾಲುದಾರಿಕೆ ಒಪ್ಪಂದಕ್ಕೆ ಭಾರತ-ಜರ್ಮನ್‌ ಸಹಿ

ನವದೆಹಲಿ: ಭಾರತ ಮತ್ತು ಜರ್ಮನಿ ಇಂದು ಮೊಬಿಲಿಟಿ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿವೆ.

ಭಾರತ ಭೇಟಿಯಲ್ಲಿರುವ ಜರ್ಮನ್‌ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್ಬಾಕ್  ಅವರೊಂದಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಮಹತ್ವದ ಮಾತುಕತೆಯನ್ನು ನಡೆಸಿದ್ದು, ಈ ವೇಳೆ ಮೊಬಿಲಿಟಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಉಕ್ರೇನ್ ಸಂಘರ್ಷ, ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ ಜಾಗತಿಕ ಸವಾಲುಗಳ ಕುರಿತು ಉಭಯ ನಾಯಕರು ಸಮಗ್ರ ಚರ್ಚೆ ನಡೆಸಿದ್ದಾರೆ.

ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜೈಶಂಕರ್, ಉಭಯ ದೇಶಗಳು ಮೊಬಿಲಿಟಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರಿಂದ ಪರಸ್ಪರ ದೇಶದ ಜನರು ಎರಡೂ ದೇಶಗಳಲ್ಲಿ ಅಧ್ಯಯನ, ಸಂಶೋಧನೆ ಹಾಗೂ ಉದ್ಯೋಗ ಮಾಡಲು ಅವಕಾಶ ಸಿಗಲಿದೆ ಎಂದು ಹೇಳಿದರು.

ಇದೇ ವೇಳೆ ಜೈಶಂಕರ್ ರಷ್ಯಾದಿಂದ ಭಾರತ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡರು ಮತ್ತು ಇದು ಹೆಚ್ಚಾಗಿ ಮಾರುಕಟ್ಟೆ ಶಕ್ತಿಗಳಿಂದ ನಡೆಸಲ್ಪಡುತ್ತದೆ ಎಂದು ತಿಳಿಸಿದರು.

ಉಕ್ರೇನ್ ವಿಷಯದಲ್ಲಿ ಭಾರತದ ನಿಲುವು ಸ್ಪಷ್ಟವಾಗಿದೆ. ಇದು ಯುದ್ಧದ ಯುಗವಲ್ಲ ಮತ್ತು ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಸ್ಪಷ್ಟವಾಗಿ ಹೇಳಿದೆ ಎಂದರು.

ಭಾರತ ಅನೇಕ ದೇಶಗಳಿಗೆ ಮಾದರಿ ಎಂದು ಬಣ್ಣಿಸಿದ ಜರ್ಮನಿ ವಿದೇಶಾಂಗ ಸಚಿವೆ, ಜರ್ಮನ್‌ ಆಭರತದೊಂದಿಗೆ ತನ್ನ ಭದ್ರತಾ ಸಹಕಾರವನ್ನು ಹೆಚ್ಚಿಸಲು ಬಯಸುತ್ತದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top