News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂಬೇಡ್ಕರ್ 67ನೇ ಮಹಾಪರಿನಿರ್ವಾಣ ದಿವಸ್: ಗಣ್ಯರ ಗೌರವಾರ್ಪಣೆ

ನವದೆಹಲಿ: ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿವಸ್ ಅಥವಾ ಪುಣ್ಯತಿಥಿಯಂದು ರಾಷ್ಟ್ರ ಇಂದು ಅವರಿಗೆ ಗೌರವ ಸಲ್ಲಿಸುತ್ತಿದೆ. ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆಯನ್ನು ಎತ್ತಿ ಹಿಡಿಯಲು ದೇಶದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಮತ್ತು ಸಂಸದರು ನಮನ ಸಲ್ಲಿಸಲಿದ್ದಾರೆ.

ಭಾರತೀಯ ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಅವರು ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು, ಅವರು ದೀನದಲಿತರು, ಮಹಿಳೆಯರು ಮತ್ತು ಕಾರ್ಮಿಕರ ಸಾಮಾಜಿಕ ತಾರತಮ್ಯದ ವಿರುದ್ಧ ಜೀವನದುದ್ದಕ್ಕೂ ಹೋರಾಟ ನಡೆಸುತ್ತಾ ಬಂದಿದ್ದಾರೆ. ಬಾಬಾಸಾಹೇಬರಿಗೆ 1990 ರಲ್ಲಿ ಮರಣೋತ್ತರವಾಗಿ ಭಾರತ ರತ್ನ ನೀಡಲಾಯಿತು.

“ಮಹಾಪರಿನಿರ್ವಾಣ ದಿವಸದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ. ಅವರು ನಮ್ಮ ದೇಶಕ್ಕೆ ನೀಡಿದ ಅನುಕರಣೀಯ ಸೇವೆಯನ್ನು ಈ ಕ್ಷಣ ಸ್ಮರಿಸುತ್ತೇನೆ. ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿತು.  ಭಾರತಕ್ಕೆ ಮಹಾನ್ ಸಂವಿಧಾನವನ್ನು ನೀಡುವ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ”‌ ಎಂದು ಮೋದಿ ಟ್ವಿಟ್‌ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top