News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಜೆಪಿ ವತಿಯಿಂದ  ಡಾ.ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ”

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯ ಎಸ್‍ಸಿ ಮತ್ತು ಎಸ್‍ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು.

ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ನಾಯಕ ಅವರು ಭಾಗವಹಿಸಿ ಮಾತನಾಡಿ, ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ನಾಯಕತ್ವ ಹೊಂದಿದ್ದರು.

ಅವರ ಶ್ರೇಷ್ಠ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top