News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿ.10ರಂದು 3 ರಾಷ್ಟ್ರೀಯ ಆಯುಷ್ ಸಂಸ್ಥೆಗಳು ರಾಷ್ಟ್ರಕ್ಕೆ ಸಮರ್ಪಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಡಿಸೆಂಬರ್‌ 10ರಂದು ಗೋವಾದಲ್ಲಿ ನಡೆಯಲಿರುವ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್‌ನಲ್ಲಿ ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಮೂರು ಸಂಸ್ಥೆಗಳ ಉದ್ಘಾಟನೆಯು ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಯಲ್ಲಿ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಸಂಶೋಧನೆ ಉತ್ತೇಜನದ ಪ್ರಧಾನಿಯವರ ದೃಷ್ಟಿಯನ್ನು ಈಡೇರಿಸುವ ಒಂದು ಹೆಜ್ಜೆಯಾಗಿದೆ ಎಂದರು.

ಈ ಸಂಸ್ಥೆಗಳ ಮೂಲಕ ಸರ್ಕಾರವು ಪ್ರತಿ ನಾಗರಿಕರಿಗೆ ಮತ್ತು ದೇಶದ ಪ್ರತಿಯೊಂದು ಪ್ರದೇಶಕ್ಕೂ ಕೈಗೆಟುಕುವ ಆರೋಗ್ಯ ಸೇವೆಯನ್ನು ಒದಗಿಸಲು ತನ್ನ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಈ ಸಂಸ್ಥೆಗಳು ದೇಶದಲ್ಲಿ ತೃತೀಯ ಹಂತದ ಆರೋಗ್ಯ ಮೂಲಸೌಕರ್ಯಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತವೆ ಎಂದು ಸಚಿವರು ಹೇಳಿದರು.

ಮೂರು ಸಂಸ್ಥೆಗಳಲ್ಲಿ ಗೋವಾದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ (AIA), ಘಾಜಿಯಾಬಾದ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ (NIUM) ಮತ್ತು ದೆಹಲಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೋಮಿಯೋಪತಿ (NIH) ಸೇರಿವೆ.

ಈ ಸಂಸ್ಥೆಗಳು ಸಂಶೋಧನೆ, ಅಂತರಾಷ್ಟ್ರೀಯ ಸಹಯೋಗಗಳನ್ನು ಮತ್ತಷ್ಟು ಬಲಪಡಿಸುತ್ತವೆ ಮತ್ತು ದೊಡ್ಡ ಸಮುದಾಯಕ್ಕೆ ಕೈಗೆಟಕುವ ದರದಲ್ಲಿ ಆಯುಷ್ ಸೇವೆಗಳನ್ನು ಒದಗಿಸುತ್ತವೆ. ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳು ಯುಜಿ, ಪಿಜಿ ಮತ್ತು ಡಾಕ್ಟರೇಟ್ ಕೋರ್ಸ್‌ಗಳನ್ನು ಮುಂದುವರಿಸಲು ಬಯಸುವ 400 ವಿದ್ಯಾರ್ಥಿಗಳಿಗೆ 400 ಹೆಚ್ಚುವರಿ ಸೀಟುಗಳನ್ನು ಸೃಷ್ಟಿಸಲಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top