News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಇದೇ 29ರವರೆಗೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 23 ದಿನಗಳಲ್ಲಿ 17 ಅಧಿವೇಶನಗಳು ನಡೆಯಲಿವೆ. ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಬಗ್ಗೆ ರಚನಾತ್ಮಕ ರೀತಿಯಲ್ಲಿ ಚರ್ಚೆಗಳನ್ನು ಸರ್ಕಾರ ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯಸಭೆಯ ಅಧ್ಯಕ್ಷರಾದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮೇಲ್ಮನೆಯಲ್ಲಿ ಕಲಾಪಗಳನ್ನು ನಿರ್ವಹಿಸುವ ಮೊದಲ ಅಧಿವೇಶನ ಇದಾಗಿದೆ.

ಅಧಿವೇಶನಕ್ಕೂ ಮುನ್ನ, ನಿನ್ನೆ ನವದೆಹಲಿಯ ಸಂಸತ್ತಿನ ಸಂಕೀರ್ಣದಲ್ಲಿ ಸರ್ವಪಕ್ಷ ಸಭೆ ನಡೆಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ವಿ.ಮುರಳೀಧರನ್ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕರಾದ ಟಿಆರ್ ಬಾಲು ಮತ್ತು ತಿರುಚಿ ಶಿವ, ಟಿಎಂಸಿ ನಾಯಕರಾದ ಡೆರೆಕ್ ಓಬ್ರಿಯಾನ್ ಮತ್ತು ಸುದೀಪ್ ಬಂಡೋಪಾಧ್ಯಾಯ, ಸಿಪಿಐ ನಾಯಕ ಬಿನೋಯ್ ವಿಶ್ವಂ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ನಂತರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಸಂಸತ್ತಿನಲ್ಲಿ ಅಧ್ಯಕ್ಷರು ಅನುಮತಿಸುವ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top