News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಮೈನ್‌ಪುರಿ ಲೋಕಸಭಾ ಕ್ಷೇತ್ರ ಮತ್ತು 5 ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಎಣಿಕೆ ಕೂಡ ನಾಳೆ ನಡೆಯಲಿದೆ.

ಸುಗಮ ಮತ್ತು ಶಾಂತಿಯುತ ಮತ ಎಣಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದೆ. ಗುಜರಾತ್‌ನಲ್ಲಿ 182 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ 37 ಮತ ಎಣಿಕೆ ಕೇಂದ್ರಗಳಿವೆ. ಅಹಮದಾಬಾದ್ ಜಿಲ್ಲೆಯಲ್ಲಿ ಗರಿಷ್ಠ ಮೂರು ಮತ ಎಣಿಕೆ ಕೇಂದ್ರಗಳಿದ್ದರೆ, ಸೂರತ್ ಮತ್ತು ಆನಂದ್ ಜಿಲ್ಲೆಯಲ್ಲಿ ತಲಾ ಎರಡು ಎಣಿಕೆ ಕೇಂದ್ರಗಳಿವೆ.

ಮಾಧ್ಯಮಗಳ ಜೊತೆ ಮಾತನಾಡಿದ ಗುಜರಾತ್ ಮುಖ್ಯ ಚುನಾವಣಾಧಿಕಾರಿ ಪಿ ಭಾರತಿ ಅವರು, ಈ ಬಾರಿ ಇವಿಎಂಗಳು ಮತ್ತು ಪೋಸ್ಟಲ್ ಬ್ಯಾಲೆಟ್ ಪೇಪರ್‌ಗಳನ್ನು ಏಕಕಾಲದಲ್ಲಿ ಎಣಿಸಲಾಗುತ್ತದೆ ಎಂದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ 68 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮೊಬೈಲ್ ಫೋನ್, ಐಪ್ಯಾಡ್, ಲ್ಯಾಪ್‌ಟಾಪ್ ಮತ್ತು ಇತರ ರೆಕಾರ್ಡಿಂಗ್ ಸಾಧನಗಳನ್ನು ನಿರ್ಬಂಧಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top