News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕಕ್ಕೆ ಬಸ್‌ ಸೇವೆ ಸ್ಥಗಿತಗೊಳಿಸಿದ ಮಹಾರಾಷ್ಟ್ರ

ಬೆಳಗಾವಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಪರಿಸ್ಥಿತಿಗಳು ಬಿಗಡಾಯಿಸಿರುವ ಕಾರಣ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC)ಯ ಬಸ್‌ಗಳು ಕರ್ನಾಟಕಕ್ಕೆ ಸಂಚರಿಸುವುದನ್ನು ಸ್ಥಗಿತಗೊಳಿಸಲಾಗಿದೆ.

ಜನರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಘಟನೆಗಳು ನಡೆಯುತ್ತಿರುವ ಕಾರಣ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವ ವಾಹನಗಳನ್ನು ಮಹಾರಾಷ್ಟ್ರ ಸರ್ಕಾರವು ಸ್ಥಗಿತಗೊಳಿಸಿದೆ. ನಿನ್ನೆ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ನಡೆದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ಗಡಿ ವಿವಾದದ ಕುರಿತು ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡೂ ಕಡೆಯಲ್ಲೂ ಸಹಮತವಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ನಿಲುವಿನ ಬಗ್ಗೆ ದೃಢವಾಗಿ ಇರುವುದಾಗಿ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಅವರು  ಹೇಳಿದ್ದಾರೆ.

ಸಿಎಂ ಟ್ವೀಟ್ ಮಾಡಿ, “ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದರು, ಮತ್ತು ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ. ಎರಡೂ ರಾಜ್ಯಗಳ ಜನರ ನಡುವೆ ಸಾಮರಸ್ಯದ ಸಂಬಂಧವಿದೆ. ಆದರೆ, ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top