News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2017 ರಿಂದ ವಿವಿಧ ಎನ್‌ಜಿಓಗಳ 6,600 ವಿದೇಶಿ ಕೊಡುಗೆ ಪರವಾನಗಿ ರದ್ದು

ನವದೆಹಲಿ: 2017 ರಿಂದ 2021 ರ ಅವಧಿಯಲ್ಲಿ ದೇಶಾದ್ಯಂತ ವಿವಿಧ ಎನ್‌ಜಿಒಗಳ 6,600ಕ್ಕೂ ಅಧಿಕ ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಸರ್ಕಾರ ರದ್ದುಗೊಳಿಸಿದೆ.

ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 700ಕ್ಕೂ ಹೆಚ್ಚು ಎಫ್‌ಸಿಆರ್‌ಎ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 600ಕ್ಕೂ ಹೆಚ್ಚು ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಕೂಡ ಪಟ್ಟಿಯಲ್ಲಿ ಸೇರಿವೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಈ ವಿಷಯ ತಿಳಿಸಿದ್ದಾರೆ.

ಈ ಎನ್‌ಜಿಒಗಳು ಎಫ್‌ಸಿಆರ್‌ಎ ಕಾಯ್ದೆಯ ವಿವಿಧ ನಿಬಂಧನೆಗಳನ್ನು ಉಲ್ಲಂಘಿಸುತ್ತಿವೆ ಎಂದು ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಅಡಿಯಲ್ಲಿ ಎಫ್‌ಸಿಆರ್‌ಎ ನೋಂದಣಿ ರದ್ದುಗೊಂಡಿರುವ ಎನ್‌ಜಿಒಗಳು ನೋಂದಣಿ ರದ್ದುಪಡಿಸಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ನೋಂದಣಿ ಅಥವಾ ಪೂರ್ವಾನುಮತಿ ಪಡೆಯಲು ಅರ್ಹವಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top