News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕ ರೈಲ್ವೆ ಯೋಜನೆಗಳಿಗೆ 6,094 ಕೋಟಿ ರೂ ಒದಗಿಸಲಾಗಿದೆ: ಅಶ್ವಿನ್‌ ವೈಷ್ಣವ್

ನವದೆಹಲಿ: 2022-23ನೇ ಸಾಲಿನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗಾಗಿ 6,094 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಇದು ಕರ್ನಾಟಕಕ್ಕೆ ಒಂದು ವರ್ಷದಲ್ಲಿ ಒದಗಿಸಲಾಗಿರುವ ದಾಖಲೆಯ ಮೊತ್ತ ಎಂದು ಅವರು ವಿವರಿಸಿದ್ದಾರೆ.

ಲೋಕಸಭೆಯಲ್ಲಿ ಸಂಸದರಾದ ಶಿವಕುಮಾರ ಸಿ ಉದಾಸಿ ಮತ್ತು ಜಿಎಂ ಸಿದ್ದೇಶ್ವರ ಅವರ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಿದ ಸಂದರ್ಭದಲ್ಲಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

“2009-14ರ ಅವಧಿಗೆ ಹೋಲಿಸಿದರೆ ವರ್ಷವೊಂದಕ್ಕೆ ಒದಗಿಸಿರುವ ಅನುದಾನ ಆರು ಪಟ್ಟು ಹೆಚ್ಚಾಗಿದೆ. 2009 ಹದಿನಾಲ್ಕರ ಅವಧಿಯಲ್ಲಿ ವಾರ್ಷಿಕ 835 ಕೋಟಿ ರೂಪಾಯಿಗಳನ್ನು ಒದಗಿಸಲಾಗುತ್ತಿತ್ತು. ಇದರಲ್ಲಿ ರಾಜ್ಯದಲ್ಲಿ ಅನುಷ್ಠಾನವಾಗುತ್ತಿರುವ ಹಾಗೂ ರಾಜ್ಯದ ಮೂಲಕ ಹಾದು ಹೋಗುತ್ತಿರುವ ಯೋಜನೆಗಳು ಸೇರಿವೆ” ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top