News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫೋರ್ಬ್ಸ್‌ನ ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್‌ನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಭಾರತದ ಒಟ್ಟು ಆರು ಮಹಿಳೆಯರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಇತರ ಭಾರತೀಯ ಮಹಿಳೆಯರೆಂದರೆ HCLTech ಅಧ್ಯಕ್ಷೆ ರೋಶ್ನಿ ನಾಡರ್ ಮಲ್ಹೋತ್ರಾ. ಇವರು ಪಟ್ಟಿಯಲ್ಲಿ 53ನೇ ಸ್ಥಾನ ಪಡೆದುಕೊಂಡಿದ್ದಾರೆ. ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅಧ್ಯಕ್ಷೆ ಮಾಧಬಿ ಪುರಿ ಬುಚ್ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಅಧ್ಯಕ್ಷೆ ಸೋಮಾ ಮೊಂಡಲ್ 67ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು 72 ನೇ ಸ್ಥಾನದಲ್ಲಿದ್ದಾರೆ. ನೈಕಾ ಸಂಸ್ಥಾಪಕ ಫಲ್ಗುಣಿ ನಾಯರ್ ಅವರು 89 ನೇ ಸ್ಥಾನದಲ್ಲಿದ್ದಾರೆ.

36ನೇ ಸ್ಥಾನದಲ್ಲಿರುವ ಸೀತಾರಾಮನ್ ಸತತ ನಾಲ್ಕನೇ ಬಾರಿಗೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2021 ರಲ್ಲಿ ಅವರು  37 ನೇ ಸ್ಥಾನದಲ್ಲಿದ್ದರೆ,  2020 ರಲ್ಲಿ 41 ನೇ ಸ್ಥಾನದಲ್ಲಿ ಮತ್ತು 2019 ರಲ್ಲಿ 34 ನೇ ಸ್ಥಾನದಲ್ಲಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top